ವಿವೇಕಾನಂದ ಮಹಾವಿದ್ಯಾಲಯದಲ್ಲಿ ಇಂದು, ನಾಳೆ ರಾಷ್ಟ್ರೀಯ ವಿಚಾರ ಸಂಕಿರಣ

Upayuktha
0



ಪುತ್ತೂರು: ಮಾರ್ಚ್ 11 ಮತ್ತು 12 ರಂದು ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು, ಇಲ್ಲಿICSSR (Indian council for social science research)  ಇದರ ಪ್ರಾಯೋಜಕತ್ವದಲ್ಲಿ RSVP (ರಾಷ್ಟ್ರೀಯ ಸಮಾಜ ವಿಜ್ಞಾನ ಪರಿಷತ್) ಸಹಯೋಗದಲ್ಲಿ ಭಾರತ್ @ 2047- ಶತಮಾನದ ದೃಷ್ಠಿ ಎಂಬ ವಿಷಯದಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ. 


ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸ್ವಾಯತ್ತ ಪಡೆದ ಮೇಲೆ ಶೈಕ್ಷಣಿಕ ಕಾರ್ಯ ಚಟುವಟಿಕೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಹಾಗೂ ಒಂದು ಶಿಕ್ಷಣ ಸಂಸ್ಥೆ ಕೇವಲ ಪಠ್ಯವನ್ನು ಬೋಧಿಸುವುದು ಮಾತ್ರವಲ್ಲ ಸಮಾಜಕ್ಕೆ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಕೂಡ ಶೈಕ್ಷಣಿಕವಾಗಿ ಸ್ಪಂದಿಸಬೇಕಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಜ್ಞಾನ ಅನುಭವಗಳನ್ನು ರಚನಾತ್ಮಕವಾಗಿ ರಾಜ್ಯ ದೇಶದ ಆಡಳಿತ ವ್ಯವಸ್ಥೆಗೆ ಕೊಡುವ ಹಿನ್ನೆಲೆಯಲ್ಲಿ ಈ ಎರಡು ದಿನಗಳ ವಿಚಾರಗೋಷ್ಠಿ ಅತ್ಯಂತ ಮಹತ್ವ ಪೂರ್ಣವಾದ ಪಾತ್ರ ವಹಿಸುತ್ತದೆ. 


ನಮ್ಮ ದೇಶ ಇದುವರೆಗೆ ನಡೆದು ಬಂದ ದಾರಿ, ಬೇರೆ ಬೇರೆ ವಲಯಗಳಲ್ಲಿ ಮಾಡಿದ ಸಾಧನೆ, ಎದುರಿಸಿದ ಸವಾಲುಗಳನ್ನು ನೆನಪಿಸುತ್ತಾ ಸ್ವಾತಂತ್ರö್ಯ ದೊರೆತ ಶತಮಾನೋತ್ಸವದ ಹೊತ್ತಿಗೆ ಭಾರತ ವಿವಿಧ ಕ್ಷೇತ್ರಗಳಲ್ಲಿ ಯಾವ ರೀತಿಯಾಗಿ ಸಾಧನೆ ಮಾಡಬೇಕು ಮತ್ತು ಆ ದೃಷ್ಠಿಯಲ್ಲಿ ನಾವೇನು ಮಾಡಬೇಕು ಎಂಬುದರ ಕುರಿತು ವಿಚಾರ ವಿಮರ್ಶೆಗಳು ನಡೆಯಲಿವೆ. 


ಕಾರ್ಯಕ್ರಮದ ಉದ್ಘಾಟನೆಯನ್ನು  ಪಂಚಾಯತ್ ರಾಜ್ ಮತ್ತು ಗ್ರಾಮಾಭಿವೃದ್ಧಿ ವಿಶ್ವ ವಿದ್ಯಾನಿಲಯ ಗದಗ, ಇಲ್ಲಿನ ಉಪಕುಲಪತಿ ಪ್ರೊ. ವಿಷ್ಣುಕಾಂತ್ ಚಟ್ಪಳ್ಳಿ ನೆರವೇರಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕೆ  ಪ್ರಭಾಕರ ಭಟ್ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಒರಿಸ್ಸ ಕೇಂದ್ರೀಯ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಪಿ ವಿ ಕೃಷ್ಣ ಭಟ್ ಭಾಗವಹಿಸಲಿದ್ದಾರೆ.


ಮಾರ್ಚ್ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ ಎಂ ಕೃಷ್ಣ ಭಟ್ ವಹಿಸಲಿದ್ದಾರೆ. ಒರಿಸ್ಸ ಕೇಂದ್ರೀಯ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಪಿ ವಿ ಕೃಷ್ಣ ಭಟ್ ಸಮಾರೋಪ ಮಾತುಗಳನ್ನಾಡಲಿದ್ದಾರೆ. 



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top