ವಿವೇಕಾನಂದ ಕಾಲೇಜಿನ ಮೇದಿನಿ ಬಿ ಮರಾಠೆ ಬಾಲ್‍ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆ

Upayuktha
0


ಪುತ್ತೂರು
: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಮೇದಿನಿ ಬಿ ಮರಾಠೆ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಬಾಲ್‍ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.



ಮಾರ್ಚ್ 21ರಿಂದ 24ರ ವರೆಗೆ ಚೆನ್ನೈನ ಅಣ್ಣಾ ಯುನಿವರ್ಸಿಟಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಬೆಂಗಳೂರಿನ ಸಿಎಂಆರ್‍ಐಟಿ ಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಉನ್ನತ ಸಾಧನೆಯನ್ನು ಪ್ರದರ್ಶಿಸಿ ಇವರು ತಂಡಕ್ಕೆ ಆಯ್ಕೆಗೊಂಡಿದ್ದಾರೆ.



ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  





Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top