ಮಂಗಳೂರು: ಕಳೆದ ಐದು ದಶಕ ಗಳಿಂದ ಯಕ್ಷಗಾನ ರಂಗದಲ್ಲಿ ವೇಷಧಾರಿಯಾಗಿ ಸೇವೆ ಸಲ್ಲಿಸುತ್ತಿರುವ ತೆಂಕು ತಿಟ್ಟಿನ ಆಗ್ರ ಪಂಕ್ತಿಯ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ ಅವರಿಗೆ ಮಾರ್ಚ್ 23 ರಂದು ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ 2024 ನೀಡಿ ಸನ್ಮಾನಿಸಲಾಗುವುದು.
ಶ್ರೀ ಧರ್ಮಸ್ಥಳ ಯಕ್ಷಗಾನ ಕೇಂದ್ರದ ಪ್ರಥಮ ತಂಡದ ಕಲಾವಿದನಾಗಿ ಯಕ್ಷ ನಾಟ್ಯ ಕಲಿತು, ಧರ್ಮಸ್ಥಳ ಮೇಳದಲ್ಲಿ ಹಂತ ಹಂತವಾಗಿ ಬೆಳೆದು ಪುಂಡು, ಸ್ತ್ರೀ, ರಾಜವೇಷ, ಎದುರು ವೇಷಗಳಲ್ಲಿ ಪ್ರಬುದ್ಧತೆ ಸಾಧಿಸಿ, ಕದ್ರಿ, ಕುಂಬ್ಳೆ, ಮಧೂರು, ಸಸಿಹಿತ್ಲು, ಬಪ್ಪನಾಡು ಮೇಳಗಳಲ್ಲಿ ತುಳು -ಕನ್ನಡ ಪ್ರಸಂಗಗಳಲ್ಲಿ ವೈವಿಧ್ಯಮಯ ಪಾತ್ರಗಳಲ್ಲಿ ಮೆರೆದು, ಕಳೆದ ಇಪ್ಪತ್ತು ವರ್ಷಗಳಿಂದ ಕಟೀಲು ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಮುಂಡಾಜೆ ಅವರು ಮೇಳದ ಪ್ರಬಂಧಕರಾಗಿಯೂ ಜನಪ್ರಿಯತೆ ಗಳಿಸಿದ್ದಾರೆ.
ಕದ್ರಿ ಕಂಬಳ ಗುತ್ತಿನ ಯಜಮಾನನಾಗಿ, ಹವ್ಯಾಸಿ ತಾಳಮದ್ದಳೆ ಅರ್ಥಧಾರಿಯಾಗಿ, ಸಂಘಟಕನಾಗಿ, ಆರೆಸ್ಸೆಸ್‌ನ ಹಿರಿಯ ಸ್ವಯಂಸೇವಕನಾಗಿ ಜನಸಂಘ -ಭಾ.ಜ.ಪದ ಹಿರಿಯ ನಾಯಕನಾಗಿ, ಕೃಷಿಕನಾಗಿದ್ದ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಅವರ ಸ್ಮರಣಾರ್ಥ ಪ್ರಶಸ್ತಿ ನೀಡಲಾಗುತ್ತಿದೆ.
ಶ್ರೀಮತಿ ವಾಸವಿ ಬಾಲಕೃಷ್ಣ ಶೆಟ್ಟಿ ಮತ್ತು ಮಕ್ಕಳ ಕಟೀಲು ಮೇಳದ ಸೇವೆ ಯಕ್ಷಗಾನ "ವೀರ ನರೇಂದ್ರ ವಿಜಯ" ಬಯಲಾಟ ಕದ್ರಿ ಕಂಬಳ ಗದ್ದೆ ಯಲ್ಲಿ ಜರಗಲಿದೆ ಎಂದು ಕದ್ರಿ ನವನೀತ ಶೆಟ್ಟಿ ಮತ್ತು ಭಾಸ್ಕರ ಶೆಟ್ಟಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ