ಮೈಸೂರಿನ ಕೃಷ್ಣನಿಗೆ ಒಲಿದ ಚಿನ್ನದ ಪದಕ

Upayuktha
0


* ಅಖಿಲ ಭಾರತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಪ್ರಥಮ

* ಅಯೋಧ್ಯೆಯಲ್ಲಿ ಕೇಂದ್ರೀಯ ಸಂಸ್ಕೃತ ವಿವಿ ಆಯೋಜನೆ


ಚಿತ್ರ: ಅಯೋಧ್ಯೆಯಲ್ಲಿ ಆಯೋಜಿಸಿದ್ದ 61ನೇ ಅಖಿಲ ಭಾರತ ಸಂಸ್ಕೃತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಮೈಸೂರಿನ ಕೃಷ್ಣನಿಗೆ ಚಿನ್ನದ ಪದಕ, ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. ಅಯೋಧ್ಯೆಯ ಶ್ರೀರಾಮನ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ ಜೀ,  ಕೇಂದ್ರೀಯ ಸಂಸ್ಕೃತ ವಿವಿ ಕುಲಪತಿ ಶ್ರೀನಿವಾಸ ವರಖೇಡಿ ಇದ್ದರು.


ಮೈಸೂರು: ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಅಯೋಧ್ಯೆಯಲ್ಲಿ ಆಯೋಜಿಸಿದ್ದ 61ನೇ ಅಖಿಲ ಭಾರತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಮೈಸೂರಿನ ಅಗ್ರಹಾರದ ಕೃಷ್ಣ ಪಿ. ಬಾದರಾಯಣ ಅವರು ಭಾರತೀಯ ವಿಜ್ಞಾನ ಭಾಷಣ ಸ್ಪರ್ಧೆ ( ಪ್ರಾಚೀನ ವಿಜ್ಞಾನದಲ್ಲಿ ಪ್ರಬಂಧನ ವಿಧಿ- ವಿಷಯ)ಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ. ವಿಜೇತ ವಿದ್ಯಾರ್ಥಿಗೆ ಪ್ರಶಂಸಾ ಪತ್ರದೊಂದಿಗೆ 12,000 ರೂ.ನಗದು ಬಹುಮಾನವನ್ನೂ ನೀಡಿ ಗೌರವಿಸಲಾಗಿದೆ.


ಮೈಸೂರಿನ ಉತ್ತರಾದಿ ಮಠದ ಹಿರಿಯ ವಿದ್ವಾಂಸ ಬಾದರಾಯಣಾಚಾರ್ಯ ಮತ್ತು ಭಾಗ್ಯಶ್ರೀ ಅವರ ಪುತ್ರನಾದ ಈತ ತಂದೆಯ ಬಳಿಯೇ ಸಂಸ್ಕೃತ ವೇದ, ಶಾಸ್ತ್ರ ಅಧ್ಯಯನ ಮಾಡುತ್ತಿದ್ದು, ಮೈಸೂರಿಗೆ ಕೀರ್ತಿ ತಂದಿದ್ದಾನೆ.  ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗದ 30ಕ್ಕೂ ಹೆಚ್ಚು ಸಂಸ್ಕೃತ ಪಾಠಶಾಲೆ, ಗುರುಕುಲಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಸಮಾರಂಭದಲ್ಲಿ ಅಯೋಧ್ಯೆಯ ಶ್ರೀರಾಮನ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ ಜೀ, ಶ್ರೀ ರಾಮಜನ್ಮಭೂಮಿ ನ್ಯಾಸದ ಅಧ್ಯಕ್ಷ ನೃತ್ಯ ಗೋಪಾಲದಾಸ ಸ್ವಾಮೀಜಿ, ರಾಮ ಜನ್ಮಭೂಮಿ ನ್ಯಾಸ ಕ್ಷೇತ್ರದ ಮಹಾಸಚಿವ ಚಂಪತ್ ರಾಯ, ಕೇಂದ್ರೀಯ ಸಂಸ್ಕೃತ ವಿವಿ ಕುಲಪತಿ ಶ್ರೀನಿವಾಸ ವರಖೇಡಿ ( ಮಾ. 22ರಂದು) ಬಹುಮಾನ ವಿತರಿಸಿದರು. ದೇಶದ ವಿವಿಧ ಭಾಗದ ಹಿರಿಯ ವಿದ್ವಾಂಸರು ತೀರ್ಪುಗಾರರಾಗಿ ಆಗಮಿಸಿದ್ದರು.


ರಾಜ್ಯದ ಪ್ರತಿನಿಧಿ:

ಕೃಷ್ಣ ಬಾದರಾಯಣ ಬೆಂಗಳೂರಿನ ಸಂಸ್ಕೃತ ವಿವಿಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಾಚೀನ ಭಾರತೀಯ ರಾಸಾಯನಶಾಸ್ತ್ರ ವಿಷಯದ ಬಗ್ಗೆ ಭಾಷಣ ಮಾಡಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದ. ಕರ್ನಾಟಕವನ್ನು ಪ್ರತಿನಿಧಿಸಿದ ಕೃಷ್ಣನಿಗೆ  ರಾಷ್ಟ್ರಮಟ್ಟದಲ್ಲಿ ಮಾನ್ಯತೆ ದೊರಕಿರುವುದನ್ನು ಹೆಮ್ಮೆಯ ಸಂಗತಿ.

 


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top