ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿಶೇಷ ಸರ್ಟಿಫಿಕೇಟ್ ಕೋರ್ಸ್‌ಗಳ ಆರಂಭ

Upayuktha
0


ಪುತ್ತೂರು: ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಸಮಾಜದ ಆಶೋತ್ತರಗಳಿಗೆ ಸ್ಪಂದಿಸುತ್ತಾ ಭಾರತೀಯ ಪರಿಕಲ್ಪನೆಯಲ್ಲಿ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರನಿರ್ಮಾಣ ಎಂಬ ಧ್ಯೇಯದೊಂದಿಗೆ ಹಲವಾರು ವರ್ಷಗಳಿಂದ ಸುಸಂಸ್ಕೃತ ಸಮಾಜವನ್ನು ರೂಪಿಸುವ ಕಾರ್ಯವನ್ನು ಕೈಗೊಂಡಿದೆ.


ಭಾರತವು ಜಾಗತಿಕ ಮಟ್ಟದಲ್ಲಿ ಬಹಳ ವೇಗವಾಗಿ ಮುನ್ನಡೆಯುತ್ತಿರುವ ಈ ಕಾಲಘಟ್ಟದಲ್ಲಿ, ಭಾರತೀಯರು ದೇಶ ವಿದೇಶಗಳಲ್ಲಿ ಅಪ್ರತಿಮ ಸಾಧನೆಗೈಯುತ್ತಿದ್ದಾರೆ. ಇಂದು ವಿದ್ಯಾರ್ಥಿಗಳು ಕೇವಲ ವಿದ್ಯಾವಂತರಾಗುವುದಲ್ಲದೇ ಅದರ ಜೊತೆಗೆ ಕೌಶಲ್ಯಪೂರ್ಣರಾಗಿರುವುದು ಬಹಳ ಮುಖ್ಯವಾಗಿರುತ್ತದೆ. ವಿದ್ಯಾರ್ಥಿ ದೆಶೆಯಲ್ಲಿ ವಿದ್ಯಾರ್ಥಿಗಳಿಗೆ ಜೀವನದ ವ್ಯಾವಹಾರಿಕ ಕೌಶಲ್ಯಗಳನ್ನು ನೀಡುವುದು ಇಂದು ಅಗತ್ಯವಾಗಿದೆ. 


ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ತನ್ನ ವಿನೂತನ ಪ್ರಯೋಗಗಳಿಗೆ ಹೆಸರುವಾಸಿಯಾಗಿದೆ. ಈ ನಿಟ್ಟಿನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು 2024-2025ನೇ ಶೈಕ್ಷಣಿಕ ವರ್ಷದಿಂದ ವಿಶೇಷ ಸರ್ಟಿಫಿಕೇಟ್ ಕೋರ್ಸ್ಗಳನ್ನು ಪರಿಚಯಿಸುತ್ತಿದೆ. ಪದವಿಪೂರ್ವ ಶಿಕ್ಷಣ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ವಿನೂತನ ಪ್ರಯೋಗವನ್ನು ನಮ್ಮ ಕಾಲೇಜು ಆರಂಭಿಸುತ್ತಿದ್ದು, ವಿದ್ಯಾರ್ಥಿಗಳಿಗೆ ವೃತ್ತಿಪರ ಕೌಶಲ್ಯಗಳನ್ನು ಪರಿಚಯಿಸಲು ಹಾಗೂ ವಾಣಿಜ್ಯ ವಿದ್ಯಾರ್ಥಿಗಳು ತಿಳಿದುಕೊಳ್ಳಲೇಬೇಕಾದ ಶೇರು ವಹಿವಾಟು, Tally (Accounting Software), ಡಿಜಿಟಲ್ ಬ್ಯಾಂಕಿಂಗ್ ವ್ಯವಹಾರ ಮುಂತಾದ ವಿಷಯಗಳ ಬಗ್ಗೆ ವ್ಯಾವಹಾರಿಕ - ಪ್ರಾಯೋಗಿಕ ಜ್ಞಾನ ನೀಡಲು ಈ ಕೋರ್ಸುಗಳು ಸಹಕಾರಿಯಾಗಲಿವೆ.


ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಈ ಕೋರ್ಸುಗಳು ನಡೆಯಲಿದ್ದು, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕನಿಷ್ಠ ಶುಲ್ಕದೊಂದಿಗೆ ಈ ತರಗತಿಗಳು ನಡೆಯಲಿವೆ. ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ದಾಖಲಾತಿ ಪಡೆದುಕೊಳ್ಳುವ ವಿದ್ಯಾರ್ಥಿಗಳು ಈ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರಯೋಜನ ಪಡೆದುಕೊಳ್ಳಬಹುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 89716 34042 ಮತ್ತು 94812 63103 ಸಂಖ್ಯೆಗಳನ್ನು ಸಂಪರ್ಕಿಸಬಹುದು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top