ನಿಟ್ಟೆ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾರ್ಚ್ 7 ರಂದು ಮಹಿಳಾ ದಿನವನ್ನು ಆಚರಿಸಲಾಯಿತು.
ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಐ.ಎ.ಎಸ್, ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಮಹಿಳಾ ಸಮುದಾಯವನ್ನು ಸಬಲೀಕರಣಗೊಳಿಸುವಲ್ಲಿ ಶಿಕ್ಷಣದ ಮಹತ್ವವನ್ನು ವಿವರಿಸಿದರು. ಪ್ರತಿಯೊಬ್ಬರೂ ಜೀವನದಲ್ಲಿ ಒಂದು ಗುರಿಯನ್ನು ಹೊಂದಿರಬೇಕು, ಆ ಗುರಿಯೇ ಅವರನ್ನು ಯಶಸ್ಸಿನತ್ತ ಕರೆದೊಯ್ಯುತ್ತದೆ. ಶ್ರಮವಹಿಸಿ ಕೆಲಸ ಮಾಡಿದರೆ ಉತ್ತಮ ಬದುಕು ಪ್ರಾಪ್ತಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ನಿಟ್ಟೆ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ.ಗೋಪಾಲ್ ಮುಗೇರಾಯ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಅವರು ನಿಟ್ಟೆ ಸಮೂಹದ ಆರಂಭ ಮತ್ತು ಗಮನಾರ್ಹ ಬೆಳವಣಿಗೆಯ ಬಗ್ಗೆ ಸಭಿಕರಿಗೆ ಅರಿವು ಮೂಡಿಸಿದರು.
ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಪ್ರೊ.ಎ.ಯೋಗೀಶ್ ಹೆಗ್ಡೆ ಮಾತನಾಡಿ, ಮಹಿಳಾ ದಿನಾಚರಣೆಯ ಮಹತ್ವವನ್ನು ಹೇಳಿದರು.
ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್ ನ ಉಪಕುಲಸಚಿವೆ ಡಾ.ರೇಖಾ ಭಂಡಾರ್ಕರ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನಿರ್ದೇಶಕ ಡಾ.ಗುರುರಾಜ್ ಕಿದಿಯೂರು, ಎನ್.ಆರ್.ಎ.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್ ಕುಮಾರ್ ಹೊಳ್ಳ, ಡಾ.ಎನ್.ಎಸ್.ಎ.ಎಂ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ ಬಿ.ಕೆ., ಡಾ.ಎನ್ ಎಸ್.ಎ.ಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಭವಾನಿ ಶೆಟ್ಟಿ, ಡಾ.ಎನ್.ಎಸ್.ಎ.ಎಂ ಇಂಗ್ಲಿಷ್ ಶಾಲೆಯ ಪ್ರಾಂಶುಪಾಲೆ ರಾಧಾ ಪ್ರಭು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಸಂದರ್ಭ ಒಟ್ಟು ೩೫೦ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಹಿಳಾ ವಸತಿ ನಿಲಯದ ಮುಖ್ಯ ವಾರ್ಡನ್ ಹಾಗೂ ಮಹಿಳಾ ದಿನಾಚರಣೆಯ ಸಂಯೋಜಕಿ ಡಾ.ವೀಣಾದೇವಿ ಶಾಸ್ತ್ರಿಮಠ ಸ್ವಾಗತಿಸಿದರು. ಇನ್ಫೋರ್ಮೇಶನ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ.ಅಶ್ವಿನಿ ಬಿ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕಿಯರಾದ ಡಾ.ಪದ್ಮಾವತಿ, ಡಾ.ಶ್ರೀವಿದ್ಯಾ ಮತ್ತು ಡಾ.ವಿದ್ಯಾ ಕುಡ್ವ ಪ್ರಾರ್ಥಿಸಿದರು. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕಿ ಡಾ.ಮಮತಾ ಗಿರೀಶ್ ವಂದಿಸಿದರು. ಮಾನವಿಕ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಶ್ವೇತಾ ಭರತ್ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ, ಬೆಂಗಳೂರಿನ ಅಝಾಯಾ ಡ್ಯಾನ್ಸ್ ಅಕಾಡೆಮಿಯ ಸಹಯೋಗದೊಂದಿಗೆ ಬೆಲ್ಲಿ ಡ್ಯಾನ್ಸ್ ಕುರಿತು ಕಾರ್ಯಾಗಾರ ನಡೆಯಿತು. ಅಪರಾಹ್ನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ