ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳೂರು ವಿವಿಗೆ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ಮಂಗಳವಾರ ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಅಧಿಕಾರ ಸ್ವೀಕರಿಸಿದ್ದಾರೆ.
ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ.ಪಿ.ಎಲ್. ಧರ್ಮ ಅವರು ಮಂಗಳೂರು ವಿವಿಯ 10ನೇ ಕುಲಪತಿಯಾಗಿದ್ದಾರೆ. ಮಂಗಳೂರು ವಿವಿಯಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಕುಲಪತಿ ಹುದ್ದೆಗೇರುವ ಅವಕಾಶ ಗಿಟ್ಟಿಸಿಕೊಂಡವರಲ್ಲಿ ಎರಡನೇಯವರು ಪ್ರೊ.ಧರ್ಮ. ಈ ಹಿಂದೆ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯರಿಗೆ ಮೊದಲ ಅವಕಾಶ ಸಿಕ್ಕಿತ್ತು.
ಪ್ರಭಾರ ಕುಲಪತಿ ಪ್ರೊ.ಜಯರಾಜ ಅಮೀನ್ ಅವರಿಂದ ಅಧಿಕಾರ ಸ್ಪೀಕರಿಸಿದರು. ಪಿ.ಎಲ್.ಧರ್ಮ ಈ ಹಿಂದೆ ಮಂಗಳೂರು ವಿವಿಯ ಕುಲಸಚಿವರಾಗಿ (ಮೌಲ್ಯಮಾಪನ), ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಹಿಂದಿನ ಕುಲಪತಿ ಪ್ರೊ. ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರ ಅಧಿಕಾರದ ಅವಧಿ ಜೂ.2 , 2023ರಲ್ಲಿ ಕೊನೆಗೊಂಡ ಬಳಿಕ ಮಂಗಳೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಹಿರಿಯ ಡೀನ್ ಪ್ರೊ.ಜಯರಾಜ್ ಅಮೀನ್ ಪ್ರಭಾರ ಕುಲಪತಿಯಾಗಿಯಾಗಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ