ಲೋಕಕಲ್ಯಾಣದ ಚಿಂತನೆಯನ್ನು ಜಗತ್ತಿಗೆ ಪಸರಿಸಿದ ದೇಶ ಭಾರತ - ಪ್ರೊ ಕೃಷ್ಣ ಭಟ್ ಪಿ ವಿ

Upayuktha
0

ವಿವೇಕಾನಂದ ಕಾಲೇಜಿನಲ್ಲಿ  ರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ




ಪುತ್ತೂರು: ದೇಶದ ಭವಿಷ್ಯ ಸುಭಿಕ್ಷವಾಗಿರಬೇಕಾದರೆ ಯುವಶಕ್ತಿ ದೇಶದ ವಿಕಾಸದ ಕಡೆಗೆ ಗಮನ ಹರಿಸಬೇಕು , ಜಗತ್ತಿನ ಕಲ್ಯಾಣಕ್ಕಾಗಿ ತನ್ನ ಅಂತಃಸತ್ವ ತಿಳಿದುಕೊಂಡು  ಮತ್ತೆ ತಲೆಯೆತ್ತಿ ನಿಂತಿರುವ ಭಾರತದ ಒಳಿತಿಗಾಗಿ ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಒಡಿಶಾ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೃಷ್ಣ ಭಟ್ ಪಿ ವಿ ಹೇಳಿದರು. 


ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ಪುತ್ತೂರು ಇದರ ಆಶ್ರಯದಲ್ಲಿ ನಡೆದ '2047ರಲ್ಲಿ ಭಾರತ ಶತಮಾನದ ದೃಷ್ಟಿ ' ಎಂಬ ವಿಷಯದ ಮೇಲೆ ನಡೆದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಕನಸನ್ನು ಕಂಡರೆ ಸಾಲದು, ಕನಸನ್ನು ನನಸು ಮಾಡುವ ಕರ್ತೃತ್ವ ಶಕ್ತಿ ವಿದ್ಯಾರ್ಥಿಗಳಲ್ಲಿರಬೇಕು. ಅಂತಹ ವಿದ್ಯಾರ್ಥಿಗಳೇ ಭಾರತದ ಭವಿಷ್ಯದ ರೂವಾರಿಗಳಾಗುತ್ತಾರೆ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೃಷ್ಣ ಭಟ್  ಕೆ ಎಂ ಮಾತನಾಡಿ ಆರ್ಥಿಕ ಬೆಳವಣಿಗೆ, ಉತ್ತಮ ಆಡಳಿತ, ಸುಸ್ಥಿರ ಪರಿಸರ, ಸಾಮಾಜಿಕ ತಿದ್ದುಪಡಿ ಎಂಬಿವು  ಭಾರತದ ವಿಕಾಸವನ್ನು ಅಳೆಯುವ ಮಾನದಂಡಗಳಾಗಿದ್ದು, ಇವುಗಳ ಬಗ್ಗೆ ಪ್ರತಿಯೊಬ್ಬ ನಾಗರಿಕನೂ ಗಮನ ಹರಿಸಬೇಕು ಎಂದು ಹೇಳಿದರು. 

ವೇದಿಕೆಯಲ್ಲಿ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್., ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ,  ಉಪಸ್ಥಿತರಿದ್ದರು.


ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್ ಸ್ವಾಗತಿಸಿದರು. ವಿಚಾರ ಸಂಕಿರಣದ ಸಂಯೋಜಕಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ವಿಜಯಸರಸ್ವತಿ ಬಿ. ವಂದಿಸಿದರು. ಉಪನ್ಯಾಸಕಿ ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.



ಎರಡು ದಿನಗಳ ಕಾಲ ನಡೆದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ದೇಶದ ವಿವಿಧ ಭಾಗಗಳಿಂದ ಸಂಶೋಧಕರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಆಗಮಿಸಿ 2047ರಲ್ಲಿ ಭಾರತ ಎಂಬ ಪರಿಕಲ್ಪನೆಯ ಕುರಿತು ವಿಚಾರ ಮಂಡನೆ ಮಾಡಿದರು.


"ಇಂದು ಪಠ್ಯಪುಸ್ತಕಗಳಲ್ಲಿರುವ ನಮ್ಮ ದೇಶದ ಇತಿಹಾಸವು ಭಾರತದ ಮೇಲೆ ದಂಡೆತ್ತಿ ಬಂದ ದಾಳಿಕೋರರು ತಮ್ಮ ಅಗತ್ಯಕ್ಕೆ ತಕ್ಕಂತೆ ಬದಲಿಸಿ ಬರೆದಿರುವುದು ಬೆಳಕಿಗೆ ಬರುತ್ತದೆ. ಹಾಗಾಗಿ ಸರಿಯಾದ ಅಧ್ಯಯನ ಮಾಡಿ ನೈಜಇತಿಹಾಸವನ್ನು ತಿಳಿಯುವುದು ಮತ್ತು ಭಾರತದ ಏಳ್ಗೆಗೆ ಪೂರಕವಾಗಿ ಹೊಸ ಇತಿಹಾಸ ಸೃಷ್ಟಿಸುವ ಹೊಣೆಗಾರಿಕೆ ಇಂದಿನ ಯುವಜನತೆಯ ಮೇಲಿದೆ" 

-ಪ್ರೊ ಕೃಷ್ಣ ಭಟ್ ಪಿ ವಿ


ಈ ಸಂದರ್ಭದಲ್ಲಿ ಬೆಂಗಳೂರಿನ ಚಾಣಕ್ಯ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಯಶವತ್ ಡೋಂಗ್ರೆ ಸಹಕಾರ  ಮತ್ತು ಗ್ರಾಮೀಣಾಭಿವೃದ್ಧಿ ಎಂಬ ವಿಷಯದ ಕುರಿತಾಗಿ ವಿಚಾರಗೋಷ್ಠಿ ಮಂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ಲಿ. ಮಾಜಿ ಅಧ್ಯಕ್ಷ ಸತೀಶ್ ಚಂದ್ರ ಎಸ್ ಆರ್ ವಹಿಸಿದ್ದರು.          

    

ತದನಂತರ ಸಹಕಾರಿ ಸಂಘದ ಅಧ್ಯಕ್ಷರು ಸದಸ್ಯರು ಮತ್ತು ಪದಾಧಿಕಾರಿಗಳೊಂದಿಗೆ ಕಾಲೇಜಿನ ಎವಿ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.

  

ಜೊತೆಗೆ ವಿಕಾಸಿತ್ ಭಾರತದ ಹೊಸ ಆರ್ಥಿಕತೆ ಎಂಬ ವಿಷಯದ ಕುರಿತಾಗಿ  ಎಸ್ ಡಿಎಂಐಎಂಡಿ ಮೈಸೂರು ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕ ಡಾ. ಬಿ ವೆಂಕಟ್ ರಾಜ್ ವಿಚಾರಗೋಷ್ಠಿ ಮಂಡಿಸಿದರು,


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top