ಪುತ್ತೂರು: ಮತದಾನ ಜಾಗೃತಿ ಕಾರ್ಯಕ್ರಮ

Upayuktha
0


ಪುತ್ತೂರು: ಸಹಕಾರ ಅಗತ್ಯ ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ಹೇಳಿದರು. 


ಅವರು ಗುರುವಾರ ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ ಅಂಗವಾಗಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.


ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹನಮರೆಡ್ಡಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್, ತಾ.ಪಂ. ಸಹಾಯಕ ನಿರ್ದೇಶಕರು (ಗ್ರಾ‌.ಉ.) ಶೈಲಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭ ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಕಾರ್ಯದರ್ಶಿಗಳು, ತಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top