ಮಂಗಳೂರು ಸೇರಿ ರಾಜ್ಯದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ ಸಾಧ್ಯತೆ

Upayuktha
0


ಮಂಗಳೂರು: ಕರ್ನಾಟಕದ 22ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ. ಬೀದರ್​ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಕೊಪ್ಪಳದಲ್ಲಿ ಮಾರ್ಚ್​ 21ರಿಂದ 2 ದಿನಗಳ ಕಾಲ ಮಳೆಯಾಗಲಿದೆ, ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಮಾರ್ಚ್​ 22ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.


ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ 1 ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top