ಯಡಿಯೂರಪ್ಪ ಭೇಟಿ ಮಾಡಿದ ಸೋಮಣ್ಣ
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ವರುಣ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಲ್ಲಿ ಸೋಲು ಕಂಡ ನಂತರ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.
ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಬಿ.ವೈ. ವಿಜಯೇಂದ್ರ ಕಣಕ್ಕೆ ಇಳಿಯಬೇಕಿತ್ತು. ಆದರೆ, ಅವರನ್ನು ಶಿಕಾರಿಪುರದಿಂದಲೇ ಕಣಕ್ಕೆ ಇಳಿಸಲಾಗಿತ್ತು. ಸೋಮಣ್ಣ ಅವರಿಗೆ ವರುಣ ಟಿಕೆಟ್ ನೀಡಲಾಗಿತ್ತು. ಫಲಿತಾಂಶದ ನಂತರ ವಿಜಯೇಂದ್ರ ವಿರುದ್ಧ ಸೋಮಣ್ಣ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.
ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಕಣಕ್ಕೆ ಇಳಿಯಲು ಬಯಸಿರುವ ಸೋಮಣ್ಣ ಲಿಂಗಾಯತ ನಾಯಕರಾದ ಜಗದೀಶ ಶೆಟ್ಟರ್, ತುಮಕೂರು ಸಂಸದ ಜಿ.ಎಸ್.ಬಸವರಾಜು, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಹಾಗೂ ತಮ್ಮ ಪುತ್ರ ಅರುಣ್ ಸೋಮಣ್ಣ ಅವರ ಜತೆ ಡಾಲರ್ಸ್ ಕಾಲೊನಿಯ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದರು.
ಭೇಟಿಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಪಕ್ಷದ ನಾಯಕರ ಜತೆ ಯಾವುದೇ ಮುನಿಸಿಲ್ಲ. ಇವೆಲ್ಲ ಮನೆಯ ಜಗಳ. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು. ರಾಜ್ಯದ ಎಲ್ಲ 28 ಸ್ಥಾನಗಳನ್ನು ಗೆಲ್ಲಬೇಕು ಎನ್ನುವುದೇ ಗುರಿ. ತುಮಕೂರು ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಮಾತುಕತೆಯೂ ನಡೆದಿಲ್ಲ. ಪಕ್ಷದ ವರಿಷ್ಠರ ನಿರ್ಧಾರದಂತೆ ನಡೆದುಕೊಳ್ಳುವೆ' ಎಂದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ