ಶಂಕರಾಲಯ ಶತಮಾನೋತ್ಸವ ಸಂಭ್ರಮ: ಶೃಂಗೇರಿ ಶ್ರೀಗಳಿಗೆ ಭವ್ಯ ಸ್ವಾಗತ

Upayuktha
0


ಮೈಸೂರು: ನಗರದ ಅಗ್ರಹಾರದ ಶೃಂಗೇರಿ ಶ್ರೀ ಶಂಕರಮಠದ ಅಭಿನವ ಶಂಕರಾಲಯದ ಶತಮಾನೋತ್ಸವ ಸಂಭ್ರಮಾಚರಣೆ ಅಂಗವಾಗಿ ಶೃಂಗೇರಿ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಅವರನ್ನು ಶನಿವಾರ ಮೆರವಣಿಗೆಯಲ್ಲಿ ಕರೆ ತರಲಾಯಿತು.


ಮಹಾರಾಜ ಕಾಲೇಜು ಮೈದಾನದ ಬಳಿಯಿಂದ ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ ಮಾರ್ಗವಾಗಿ ಶ್ರೀಶಂಕರ ಮಠಕ್ಕೆ ಕುಂಭಮೇಳ ಮಂಗಳವಾದ್ಯದೊಂದಿಗೆ ಶೋಭಾಯಾತ್ರೆ ಮೂಲಕ ಕರೆತರಲಾಯಿತು. ಬೆಳಗ್ಗೆಯಿಂದ ಮಹಾರುದ್ರ ಜಪ ಮತ್ತು ಶತಚಂಡಿ ಪಾರಾಯಣ ನೆರವೇರಿತಲ್ಲದೇ ಸ್ವಾಮೀಜಿ ಸಂಜೆ ಧಾರ್ಮಿಕ ಪೂಜಾ ವಿಧಿ ವಿಧಾನ ನೆರವೇರಿಸಿದರು. ಮಠದ ಆವರಣದಲ್ಲಿ ನಿರ್ಮಿಸಿರುವ ಶ್ರೀ ಸಚ್ಚಿದಾನಂದ ವಿಲಾಸ ಗುರುಭವನವನ್ನು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ  ಉದ್ಘಾಟಿಸಿ, ಆಶೀರ್ವಚನ ನೀಡಿದರು.


ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಶಾಸಕ ಎಸ್.ಎ.ರಾಮದಾಸ್, ಎಂ.ಕೆ. ಸೋಮಶೇಖರ್, ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್, ಜಿಲ್ಲಾ ಬ್ರಾಹ್ಮಣ ಸಂಘದ ಟಿ.ಡಿ. ಪ್ರಕಾಶ್ ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top