ಪುತ್ತೂರು: ನಮ್ಮ ಪ್ರತಿಯೊಂದು ದೈನಂದಿನ ವ್ಯವಹಾರಗಳಲ್ಲಿ ನಾವು ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಬಳಕೆ ಮಾಡುತ್ತೇವೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ತಂತ್ರಜ್ಞಾನಗಳನ್ನು ನಾವು ಅರಿತುಕೊಂಡರೆ ಜೀವನ ಸುಗಮವಾಗುತ್ತದೆ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲ ವಿಜ್ಞಾನ ವಿಭಾಗ ಹಾಗೂ ಐಎಸ್‍ಟಿಇ ವಿದ್ಯಾರ್ಥಿ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಸಂದರ್ಭದಲ್ಲಿ ವಿಕಸಿತ ಭಾರತಕ್ಕಾಗಿ ಸ್ಥಳೀಯ ತಂತ್ರಜ್ಞಾನಗಳು ಎನ್ನುವ ವಿಷಯಾಧಾರಿತ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತಾಡಿದರು. ವಿದ್ಯಾರ್ಥಿಗಳು ಸ್ಥಳೀಯ ಸಾರ್ವಜನಿಕರ, ರೈತರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡು ಅದಕ್ಕೆ ಪೂರಕವಾದ ಪರಿಹಾರಗಳನ್ನು ಕಂಡುಹುಡುಕುವ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು ತನ್ಮೂಲಕ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ಮಾತನಾಡಿ ಪಠ್ಯಕ್ರಮಕ್ಕೆ ಪೂರಕವಾಗಿ ಅನೇಕ ವಿಷಯಗಳು ಜಾಲತಾಣಗಳಲ್ಲಿ ಲಭ್ಯವಿವೆ. ಇದನ್ನು ಅಭ್ಯಸಿಸಿದರೆ ಕಾರ್ಪೋರೇಟ್ ಸಂಸ್ಥೆಗಳು ಬಯಸುವ ಮಟ್ಟಕ್ಕೆ ನಮ್ಮನ್ನು ನಾವು ಉನ್ನತೀಕರಿಸಿಕೊಳ್ಳಬಹುದು ಇದು ವೃತ್ತಿ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದರು.
ಮೂಲ ವಿಜ್ಞಾನ ವಿಭಾಗದ ಪ್ರೊ.ತೇಜಸ್ವಿನಿ.ಎಲ್.ಪಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮ ಸಂಯೋಜಕ ಡಾ.ರವೀಶ್.ಪಿ.ಎಮ್ ಸ್ವಾಗತಿಸಿ, ಸಹ ಸಂಯೋಜಕ ಡಾ.ಶ್ರೀಶ ಭಟ್ ವಂದಿಸಿದರು. ವಿದ್ಯಾರ್ಥಿನಿಯರಾದ ಶ್ರೇಯಾ ಶೆಟ್ಟಿ ಹಾಗೂ ಶೃತ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ