ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಐಕ್ಯೂಎಸಿ ಮತ್ತು ಅಭ್ಯುದಯ ಸಮಾಜಕಾರ್ಯ ವೇದಿಕೆ - ಸಮಾಜಕಾರ್ಯ ವಿಭಾಗ ಇದರ ಸಹಯೋಗದಲ್ಲಿ ಬಿ.ಎಸ್.ಡಬ್ಲ್ಯೂ, ಎಂ.ಎಸ್.ಡಬ್ಲ್ಯೂ ಹಾಗೂ ಎನ್.ಎಸ್.ಎಸ್. ವಿದ್ಯಾರ್ಥಿಗಳಿಗೆ “ಆಪ್ತ ಸಮಾಲೋಚನೆಯ ತಂತ್ರಗಳು ಮತ್ತು ಸೇವೆ ವಿಶೇಷ ಉಪನ್ಯಾಸ ಕಾರ್ಯಕ್ರಮ” ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಸೌಜನ್ಯ ಕೆ. ಶೆಟ್ಟಿ, ಮೆಡಿಕಲ್ ಸೋಶಿಯಲ್ ವರ್ಕರ್ & ಅಡ್ಮಿನಿಸ್ಟ್ರೇಟಿವ್ ಆಫೀಸರ್, ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ, ದೊಡ್ಡಣಗುಡ್ಡೆ, ಉಡುಪಿ ಇವರು–ಆಪ್ತ ಸಮಾಲೋಚನೆಯ ಮಹತ್ವ ಹಾಗೂ ಪ್ರಸ್ತುತ ಸಮಾಜದಲ್ಲಿ ಎದುರಾಗುತ್ತಿರುವ ವ್ಯಸನಗಳಿಗೆ ಸಾಮಾಜಿಕ ಕಾರ್ಯಕರ್ತರ ನೆಲೆಯಲ್ಲಿ ಹೇಗೆ ಅದನ್ನು ನಿರ್ವಹಿಸಬೇಕು ಹಾಗೂ ವೃತ್ತಿ ಬದುಕಿನಲ್ಲಿ ತಮ್ಮ ಕಾರ್ಯನಿರ್ವಹಣೆ ಮತ್ತು ಕೌಶಲ್ಯಗಳನ್ನು ಅಭಿವೃದ್ದಿಪಡಿಸಿಕೊಡಿಸುವುದರ ಬಗ್ಗೆ ಉಪನ್ಯಾಸ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಪದವಿ ಸಮಾಜಕಾರ್ಯ ವಿಭಾಗದ ಮುಖ್ಯುಸ್ಥರಾದ ಮಮತಾ, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುಷ್ಮಾ ಟಿ., ಡಾ. ಪ್ರಮೀಳಾ ಜೆ. ವಾಸ್, ಸಮಾಜಕಾರ್ಯ ವೇದಿಕೆ ಉಪಾಧ್ಯಕ್ಷರಾದ ಕು. ದಾಕ್ಷಾಯಿಣಿ ತೃತೀಯ ಬಿ.ಎಸ್.ಡಬ್ಲ್ಯೂ. ಉಪಸ್ಥಿತರಿದ್ದರು. ಅಂತಿಮ ಬಿ.ಎಸ್.ಡಬ್ಲ್ಯೂ. ವಿದ್ಯಾರ್ಥಿನಿ ಗೌತಮಿ ಕಾರ್ಯಕ್ರಮ ನಿರೂಪಿಸಿದರು. ಸಾಕ್ಷಿ ಎ. ಶೆಟ್ಟಿ ಸ್ವಾಗತಿಸಿದರು. ದಾಕ್ಷಾಯಿಣಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ