ಆಧುನಿಕ ಸಮಾಜದಲ್ಲಿ ಸಮಾಜಶಾಸ್ತ್ರೀಯ ಅಧ್ಯಯನಗಳು ಪ್ರಮುಖವಾಗುತ್ತವೆ : ಡಾ. ಗಿರಿಧರ ರಾವ್ ಎಂ.ಎಸ್.

Upayuktha
0

  


ತೆಂಕನಿಡಿಯೂರು: ಸಮಾಜಶಾಸ್ತ್ರವು ಸಮಾಜದ ವೈಜ್ಞಾನಿಕ ಅಧ್ಯಯನವಾಗಿದ್ದು, ಆಧುನಿಕತೆಯಿಂದಾಗಿ ಬದಲಾಗುತ್ತಿರುವ ಸಾಮಾಜಿಕ ಸನ್ನಿವೇಶಗಳನ್ನು ಅರ್ಥೈಸಿಕೊಂಡು ಸಾಮಾಜಿಕ ಸಮಸ್ಯೆಗಳಿಗೆ ಸ್ಪಂಧಿಸುವ ಕಾರ್ಯವನ್ನು ನಿರ್ವಹಿಸುತ್ತವೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಡಾ. ಗಿರಿಧರ ರಾವ್ ಎಂ.ಎಸ್. ಹೇಳಿದರು.  


ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ವತಿಯಿಂದ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ 2020 ಇದರ ಮಂಗಳೂರು ವಿ.ವಿ. ಆರನೇ ಸೆಮಿಸ್ಟರ್‌ನ ಪಠ್ಯಕ್ರಮದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.  


ಕಾರ್ಯಾಗಾರದಲ್ಲಿ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವೈ. ರವೀಂದ್ರನಾಥ ರಾವ್, ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುನೀತಾ ವಿ. ಹಾಗೂ ಮಂಗಳೂರು ಫಾದರಮುಲ್ಲರ್ ಸಂಸ್ಥೆಯ ಪ್ರಾಧ್ಯಾಪಕಿ ಡಾ. ವೀಣಾ ಮನೋಜ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.  ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು.  ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ವಿನಯ್ ರಜತ್ ಡಿ., ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಘವ ನಾಯ್ಕ, ಕಾರ್ಯಾಗಾರದ ಸಂಚಾಲಕ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದರು.  ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ  ವಿದ್ಯಾ ಎಸ್. ಕಾರ್ಯಕ್ರಮ ನಿರ್ವಹಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
To Top