ತೆಂಕನಿಡಿಯೂರು ಕಾಲೇಜು: ವಿಶೇಷ ಉಪನ್ಯಾಸ ಕಾರ್ಯಕ್ರಮ

Upayuktha
0

ತೆಂಕನಿಡಿಯೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಐಕ್ಯೂಎಸಿ, ಸಮಾಜಕಾರ್ಯ ವಿಭಾಗದ ವತಿಯಿಂದ 'ಗ್ರಾಮೀಣಾಭಿವೃದ್ಧಿಯಲ್ಲಿ ಯುವಕ ಮಂಡಲಗಳ ಪಾತ್ರ' ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಮಂಗಳವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು. 


ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಬಾರಕೂರಿನ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಗಣೇಶ್ ಪ್ರಸಾದ್ ಜಿ. ನಾಯಕ್ ಮಾತನಾಡುತ್ತಾ, ಯುವಕ ಮಂಡಲಗಳ ಸಾಮರ್ಥ್ಯ, ದೌರ್ಬಲ್ಯ, ಅವಕಾಶಗಳು ಮತ್ತು ಸವಾಲುಗಳ ಬಗ್ಗೆ ಮಾತನಾಡಿದರು. 


ಯುವಕ ಮಂಡಲಗಳ ಕಾರ್ಯನಿರ್ವಹಣೆಗೆ ಅವುಗಳಿಗಿರುವ ತಳಮಟ್ಟದ ಬೆಂಬಲ ಮತ್ತು ಸಂಪರ್ಕ ಇಂಧನವಾಗಿದೆ. ಕರಾವಳಿ ಭಾಗದಲ್ಲಿ ಶಿಕ್ಷಣ, ಆರೋಗ್ಯ, ಕೃಷಿಗೆ ಸಂಬಂಧಿಸಿದಂತೆ ಯುವಕ ಮಂಡಲಗಳು ಕ್ರಿಯಾಶೀಲ ಪ್ರಯತ್ನಗಳನ್ನು ಮಾಡಿವೆ ಎಂದರು. ಸಮಾಜಕಾರ್ಯ ವಿಭಾಗದ ಸಂಯೋಜಕ ಡಾ. ದುಗ್ಗಪ್ಪ ಕಜೆಕಾರ್, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಘವ ನಾಯ್ಕ್, ಸಹಾಯಕ ಪ್ರಾಧ್ಯಾಪಕರಾದ ಸುಷ್ಮಾ ಟಿ., ಮಮತಾ, ಸಮಾಜಕಾರ್ಯ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top