ಶಾಲೆ ಬೆಲೆ ಕಟ್ಟಲಾಗದ ಆಸ್ತಿ ಮತ್ತು ಅಕ್ಷರ ಸಂಪತ್ತನ್ನು ನೀಡುವ ಕೇಂದ್ರ : ತಮ್ಮಣ್ಣಗೌಡ

Upayuktha
0


ಹಾಸನ
: ಶಾಲೆಯು ಬೆಲೆ ಕಟ್ಟಲಾಗದ ಆಸ್ತಿಯಾಗಿದೆ. ಅಕ್ಷರ ಸಂಪತ್ತನ್ನು ಕೊಡುವ ಕೇಂದ್ರ ಶಾಲೆಯಾಗಿದ್ದು, ಇದು ಎಂದೆಂದಿಗೂ ನಾಶವಾಗದ ಸಂಪತ್ತಾಗಿದೆ. ವಿದ್ಯಾರ್ಥಿಗಳು ಶಾಲೆಯನ್ನು ಹೆಚ್ಚು ಪ್ರೀತಿಸಬೇಕು. ಆ ಮೂಲಕ ವಿದ್ಯಾರ್ಥಿಗಳು ದೊಡ್ಡ ಗುರಿಯನ್ನು ಹೊಂದಿ ದೊಡ್ಡ ದೊಡ್ಡ ಸಾಧನೆಗಳನ್ನು ಮಾಡಬೇಕು ಎಂದು ಹಾಸನ ಜಿಲ್ಲಾ ಉಪನಿರ್ದೇಶಕರ ಕಛೇರಿಯ ಶಿಕ್ಷಣಾಧಿಕಾರಿ ತಮ್ಮಣ್ಣ ಗೌಡ ರವರು ಹೇಳಿದರು. 




ತಾಲ್ಲೂಕಿನ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಶಾಂತಿಗ್ರಾಮ ಇಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಾವು - ನೀವೆಲ್ಲರೂ ಇಪ್ಪತ್ತೊಂದನೇ ಶತಮಾನದ ಸ್ಪರ್ಧಾತ್ಮಕ ಯುಗದಲ್ಲಿ ಬದುಕುತ್ತಿದ್ದೇವೆ. ಇಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಂಡು ಬದುಕಿನಲ್ಲಿ ಸಾಧನೆಗಳನ್ನು ಮಾಡಬೇಕಿದೆ. ಹತ್ತನೇ ತರಗತಿ ವಿದ್ಯಾರ್ಥಿಗಳು ಎ+ ಮತ್ತು ಎ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಶಾಲೆಯ ಯಶೋಗಾಥೆಗೆ ಕಾರಣವಾಗಬೇಕು. ಎಲ್ಲಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿಗಳು ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ಮಾನವೀಯ ಮೌಲ್ಯವೇ ಅತ್ಯಂತ ಮೊದಲನೆಯ ಹಾಗೂ ಕೊನೆಯ ದೇವರು ಎಂದು ಹೇಳುತ್ತಾ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ದೈರ್ಯ ಮತ್ತು ಆತ್ಮ ವಿಶ್ವಾಸವನ್ನು ಗಟ್ಟಿಗೊಳಿಸಬೇಕು ಎಂದರು. 




ಕರ್ನಾಟಕ ವಸತಿ ಶಾಲೆಗಳ ಸೌಕರರ ಸಂಘದ ರಾಜ್ಯಾಧ್ಯಕ್ಷರಾದ ರವಿಚಂದ್ರನ್ ರವರು ಮಾತನಾಡಿ ವಿದ್ಯಾರ್ಥಿಗಳು ಶಾಲೆಗೆ ಉತ್ತಮ ಗುಣಮಟ್ಟದ ಫಲಿತಾಂಶವನ್ನು ನೀಡಬೇಕು ಇದಕ್ಕಾಗಿ ಸತತ ಪರಿಶ್ರಮ ಪ್ರಯತ್ನ ಮಾಡಬೇಕು ಎಂದರು. 




ಪ್ರಾಂಶುಪಾಲರಾದ ರಾಜಾ ರವಿಚಂದ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ತಮ್ಮ ಅನಿಸಿಕೆ - ಅನುಭವಗಳನ್ನು ಹಂಚಿಕೊಂಡರು. ಹಿರಿಯ  ಶಿಕ್ಷಕರಾದ ಸಿ.ಎನ್. ಉಷಾ ರವರು ಸರ್ವರನ್ನು ಸ್ವಾಗತಿಸಿದರು. ನಿಲಯ ಪಾಲಕರಾದ ವನಿತಾ ಮತ್ತು ಎಲ್ಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top