ತೆಂಕನಿಡಿಯೂರು ಕಾಲೇಜು: ಸಾಮಾಜಿಕ ಉದ್ಯಮಶೀಲತೆ ಕಾರ್ಯಾಗಾರ

Upayuktha
0


ತೆಂಕನಿಡಿಯೂರು: ಸಾಮಾಜಿಕ, ಸಾಂಸ್ಕೃತಿಕ ಮತ್ತು ಸಮಸ್ಯೆಗಳಿಗೆ ಸಾಮಾಜಿಕ ಉದ್ಯಮಶೀಲತೆ ಒಂದು ಅದ್ಭುತ ವೇದಿಕೆ. ವ್ಯವಹಾರ ಅಧ್ಯಯನ ಮತ್ತು ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳು ಸಾಮಾಜಿಕ ಉದ್ಯಮದ ಗುರಿ, ಆಳ ಅಗಲವನ್ನು ಅರಿತಲ್ಲಿ, ಆರ್ಥಿಕ ಲಾಭದೊಂದಿಗೆ ಸಾಮಾಜಿಕ ಸೇವೆಯನ್ನು ಸಹ ಒದಗಿಸಲು ಇದು ಅತ್ಯಂತ ಪರಿಣಾಮಕಾರಿ ಯಾಗಲಿದೆ ಎಂದು ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ. ರೋಷನಿ ಯಶವಂತ್ ನುಡಿದರು. 


ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಐಕ್ಯೂ ಎಸಿ ಮತ್ತು ವಾಣಿಜ್ಯ ಹಾಗೂ ವ್ಯವಹಾರ ಅಧ್ಯಯನ ಶಾಸ್ತ್ರ ವಿಭಾಗ ಆಯೋಜಿಸಿದ ಸಾಮಾಜಿಕ ಉದ್ಯಮ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ. ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಶ್ರೀಮತಿ ಬಿಂದು ಟಿ, ವ್ಯವಹಾರ ಅಧ್ಯಯನಶಾಸ್ತ್ರ ಮುಖ್ಯಸ್ಥ ಡಾ. ರಘು ನಾಯ್ಕ, ಸಹಪ್ರಾಧ್ಯಾಪಕ ಉಮೇಶ್ ಪೈ, ಸಹಾಯಕ ಪ್ರಾಧ್ಯಾಪಕರಾದ ಡಾ. ಗೀತಾ ಎನ್., ದಿನೇಶ್ ಎಂ. ಉಪನ್ಯಾಸಕರಾದ ಶ್ರೀಮತಿ ಸ್ಮಿತಾ ಹೆಗಡೆ, ಶ್ರೀಮತಿ ನಮಿತಾ ಹೆಗಡೆ, ವಿನಯಶ್ರೀ, ಶ್ರೀಮತಿ ಧನ್ಯ, ಅರವಿಂದ ಭಟ್, ಉಪಸ್ಥಿತರಿದ್ದರು. ಅಂತಿಮ ಬಿಕಾಂ ವಿದ್ಯಾರ್ಥಿನಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಸುಮಾ ವಂದಿಸಿದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top