ಪೋಲಿಯೋ ಮುಕ್ತ ಸಮಾಜದ ನಿಮಾರ್ಣವಾಗಬೇಕು : ಯಶ್‌ಪಾಲ್ ಎ. ಸುವರ್ಣ

Upayuktha
0


ಉಡುಪಿ: ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕರಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು.    

    

ಅವರು ಶನಿವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಿತ್ರಾ ಸ್ಕೂಲ್ ಆಫ್ ನರ್ಸಿಂಗ್, ಸಿ.ಎಸ್.ಐ ಲೋಂಬೋರ್ಡ್ ಸ್ಕೂಲ್ ಆಫ್ ನರ್ಸಿಂಗ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

    

ಪೋಲಿಯೋದಿಂದ ರಕ್ಷಿಸಲು ಹಾಗೂ ಅವರುಗಳ ರೋಗ ನಿರೋಧಕತೆಯನ್ನು ಹೆಚ್ಚಿಸಲು ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಪೋಲಿಯೋ ಲಸಿಕೆಯನ್ನು ಹಾಕಿಸಬೇಕು ಎಂದ ಅವರು, ಪಲ್ಸ್ ಪೋಲಿಯೋ ಲಸಿಕೆ ಕುರಿತು ಅರಿವು ಮೂಡಿಸುವುದರೊಂದಿಗೆ ಅದರಿಂದ ಉಂಟಾಗುವ ಅಂಗವೈಕಲ್ಯತೆಯನ್ನು ಹಾಗೂ ಅದರ ಭೀಕರ ಪರಿಣಾಮವನ್ನು ತಡೆಗಟ್ಟುವಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ ಎಂದರು.

    

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಐ.ಪಿ ಗಡಾದ, ನಗರಸಭಾ ಸದಸ್ಯೆ ರಶ್ಮಿ ಭಟ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ ಜ್ಯೋಸ್ನಾ ಬಿ ಕೆ, ಡಾ ರಾಜ್ ಗೋಪಾಲ ಭಂಡಾರಿ, ಡಾ.ವಾಸುದೇವ ಆರ್.ಎಮ್ ಓ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಛೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಮಿತ್ರಾ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಲೆಂಬೋರ್ಡ್ ಸ್ಕೂಲ್ ಆಫ್ ನರ್ಸಿಂಗ್ ಸಮೂಹ ಸಂಸ್ಥೆಗಳ ಪ್ರಾಧ್ಯಪಕರು ಹಾಗೂ ವಿದ್ಯಾರ್ಥಿಗಳು, ಜಿಲ್ಲಾ ಪೋಲೀಸ್ ಉಪನಿರೀಕ್ಷಕರ ಕಛೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ನಗರಸಭಾ ಅಧಿಕಾರಿ ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

     

ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಿಂದ ಆರಂಭಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸಮಾರೋಪಗೊಂಡಿತು. 



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top