ಮಾ.8: ಮಹಿಳಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Upayuktha
0


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ,  ನಗರಸಭೆ , ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ 2024 ಅಂಗವಾಗಿ ಮಹಿಳಾ ಕೇಂದ್ರೀಕೃತ  ಶಾಸನಗಳ  ಕುರಿತು ಜಾಗೃತಿ ಕಾರ್ಯಕ್ರಮವನ್ನು ಮಾರ್ಚ್ 8 ರಂದು ಬೆಳಗ್ಗೆ 10.30 ನಗರದ ರಾಜಾಂಗಣದ  ಶ್ರೀ ಕೃಷ್ಣ ಮಠದ ಆವರಣದಲ್ಲಿ ಆಯೋಜಿಸಲಾಗಿದೆ.


ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

     

ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ ರಾಘವೇಂದ್ರ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್ ಬೋಜೇಗೌಡ, ಡಾ. ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಶಾಸಕರಾದ ಸುನೀಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಪೌರಯುಕ್ತ ರಾಯಪ್ಪ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top