ಉಡುಪಿ: ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳಿಸಿಕೊಂಡು ಸಾರ್ವಜನಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.
ಅವರು ಶುಕ್ರವಾರ ನಗರದ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಮಂಗಳೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಿಬಿರದಲ್ಲಿ ಸಂಪೂರ್ಣವಾಗಿ ಭಾಗವಹಿಸಿ ವ್ಯಕ್ತಿತ್ವ ವಿಕಾಸನದೊಂದಿಗೆ, ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದ ಅವರು ಜೀವನದಲ್ಲಿ ಕಲಿಕೆಯು ಅತ್ಯಂತ ಪ್ರಮುಖ ವಿಚಾರವಾಗಿದ್ದು ಪ್ರತಿ ನಿತ್ಯವೂ ಹೊಸ ವಿಚಾರಗಳನ್ನು ಕಲಿಯುವುರೊಂದಿಗೆ ಗುರಿಯತ್ತ ಸಾಗಬೇಕು ಎಂದರು.
ವಿಚಾರ ವಿನೀಮಯ ಹಾಗೂ ಜೀವನದಲ್ಲಿ ಧನಾತ್ಮಕ ಮನೋಭಾವವನ್ನು ಬೆಳಿಸಿಕೊಂಡು ಸಮಾಜಕ್ಕೆ ಕೊಡುಗೆಯನ್ನು ನೀಡುವುದರೊಂದಿಗೆ ಸದೃಢ ರಾಷ್ಟç ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪೌರಾಯುಕ್ತ ರಾಯಪ್ಪ, ವಿದ್ಯಾರ್ಥಿ ಜೀವನದಲ್ಲಿ ಒಳ್ಳೆಯ ಮೌಲ್ಯಗಳನ್ನು ಆಳವಡಿಸಿಕೊಂಡಾಗ ಉತ್ತಮ ಬದುಕನ್ನು ರೂಪಿಸಲು ಸಾಧ್ಯವಾಗುತ್ತದೆ, ಯುವ ಜನತೆಯು ಸಮಾಜದಲ್ಲಿ ಒಳ್ಳೆಯ ವಿಚಾರಗಳನ್ನು ಸ್ಪಿಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಡಾ .ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಭಾಸ್ಕರ ಶೆಟ್ಟಿ ಯುವ ಜನತೆಯು ಆದರ್ಶ ವ್ಯಕ್ತಿಗಳ ಜೀವನ ಮೌಲ್ಯವನ್ನು ತಮ್ಮ ಬದುಕಿನಲ್ಲಿ ಅನುಸರಿಸುವುದರೊಂದಿಗೆ ಜೀವನದಲ್ಲಿ ಯಾವುದೇ ಕಾರ್ಯಗಳನ್ನು ಬದ್ದತೆಯಿಂದ ನಿರ್ವಹಿಸಬೇಕು ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿಕಟಪೂರ್ವ ರಾಜ್ಯ ಎನ್ ಎಸ್.ಎಸ್ ಸಂಪರ್ಕಾಧಿಕಾರಿ ಡಾ.ಗಣನಾಥ ಶೆಟ್ಟಿ ಎಕ್ಕಾರು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಖಜಾಂಜಿ ರಮಾದೇವಿ , ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಂಟಿ ಖಜಾಂಜಿ ಚಂದ್ರಶೇಖರ್ , ವಿಜ್ಞಾನ ನಿಕಾಯದ ಡೀನ್ ಶ್ರೀಧರ್ ಪ್ರಸಾದ್ ಕೆ. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವಾಣಿ ಆರ್ ಬಲ್ಲಾಳ್, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೋ. ನಿಕೇತನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮ, ಸಾಫಲ್ಯ ಟ್ರಸ್ಟ್ ನ ನಿರ್ದೇಶಕ ನಿರುಪಮ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ.ಡಿ ಸ್ವಾಗತಿಸಿದರೆ, ಅಮೃತ ಮತ್ತು ಚೈತ್ರ ನಿರೂಪಿಸಿ, ಪ್ರೀತಿ ಶೆಟ್ಟಿ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ