ಕ್ರೀಡೆ ಬದುಕಿನ ಅವಿಭಾಜ್ಯ ಅಂಗವಾಗಿರಲಿ: ಡಾ.ಬಿ.ಎ.ಕುಮಾರ್ ಹೆಗ್ಡೆ

Upayuktha
0


ಉಜಿರೆ: ದೈಹಿಕ ಮತ್ತು ಮಾನಸಿಕ ಕ್ಷಮತೆಯನ್ನು ರಕ್ಷಿಸಲು ಕ್ರೀಡೆ ಉಪಯುಕ್ತವಾಗಿದೆ. ಎಂದು ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ ಕುಮಾರ್ ಹೆಗ್ಡೆ ಅಭಿಪ್ರಾಯಪಟ್ಟರು.


ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನದ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದರು.


ಇಂದಿನ ದಿನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತೀ ಮುಖ್ಯವಾಗಿದೆ.   ಜೀವನಕ್ಕೆ ಪ್ರತಿದಿನ ಕನಿಷ್ಟ ನಲವತ್ತೈದು ನಿಮಿಷಗಳಾದರೂ ಆಟೋಟದಲ್ಲಿ ತೊಡಗಿಕೊಳ್ಳಬೇಕು. ಆಗ ದೇಹ ಮತ್ತು ಮನಸ್ಸು ಸದೃಡವಾಗಿರುತ್ತದೆ. ಹಾಗೂ ದೇಹದ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು ಎಂದು ನುಡಿದರು.


ಬದುಕಿನಲ್ಲಿ ಕ್ರೀಡಾರಂಗವು  ಅಗಾಧವಾದ ಅನುಭವವನ್ನು ತಂದುಕೊಡುತ್ತದೆ. ಇದು ಮಾನಸಿಕ ಹಾಗೂ ದೈಹಿಕವಾಗಿಯೂ ಪರಿಣಾಮವನ್ನು ಬೀರುತ್ತದೆ. ಹೊಸ ರೀತಿಯ ಜೀವನ ಶೈಲಿಗೂ ನಮ್ಮನ್ನು ತೆರೆದುಕೊಳ್ಳುವಂತೆ ಮಾಡುತ್ತದೆ ಎಂದು ಮುಖ್ಯ ಅತಿಥಿ ಹೆಮ್ಮೆಯ ಹಳೇಯ ವಿದ್ಯಾರ್ಥಿ ಹಾಗೂ ರಾಷ್ರೀಯ ಕ್ರೀಡಾಪಟು ಯೊಗೀಶ್ ಕುಮಾರ ನಡಕ್ಕಾರ ತಿಳಿಸಿದರು.


ಕ್ರೀಡಾ ವಿದ್ಯಾರ್ಥಿಗಳಿಂದ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ 30ಕ್ಕೂ ಹೆಚ್ಚಿನ ವಿದ್ಯಾರ್ಥಿ ತಂಡಗಳಿಂದ ಆಕರ್ಷಕ ಪಥ ಸಂಚಲನ ಜರುಗಿತು. ಕ್ರೀಡಾ ಶಿಕ್ಷಕರಾದ ಸುದೀನಾ, ಶಾರದಾ, ರಮೇಶ್.ಹೆಚ್ ಉಪಸ್ಥಿತರಿದ್ದರು. ಪ್ರಾಧ್ಯಾಪಕ ಮಹೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top