ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಏಪ್ರಿಲ್ 5, 2024 (ಶುಕ್ರವಾರ) ರಂದು ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಟ್ಟದ ಸಂಗೀತ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನದೊಂದಿಗೆ ಪ್ರಶಸ್ತಿ ಪತ್ರ ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಲು ಮಾರ್ಚ್ 23, 2024 ಕೊನೆಯ ದಿನಾಂಕವಾಗಿರುತ್ತದೆ. ನೋಂದಣಿ ವಿವರವನ್ನು ಕಾರ್ಯದರ್ಶಿ, ಹಳೆ ವಿದ್ಯಾರ್ಥಿ ಸಂಘ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇವರಿಗೆ ನಿಗದಿತ ದಿನಾಂಕದೊಳಗೆ ತಲುಪಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ಸ್ಪರ್ಧೆಯ ಸಂಚಾಲಕ ಜಿ. ಮುರಳೀಧರ ಕಾಮತ್ (9845008610) ಇವರನ್ನು ಸಂಪರ್ಕಿಸಬಹುದು, ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ