ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಅಂತರ ಕಾಲೇಜು ಮಹಿಳಾ ಹ್ಯಾಂಡ್ ಬಾಲ್ ಪಂದ್ಯಾವಳಿ ದಿನಾಂಕ 28/03/2024ರ ಗುರುವಾರದಂದು ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ 12 ತಂಡಗಳು ಭಾಗವಹಿಸಲಿದ್ದು, ನಾಕೌಟ್ ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ.
ಈ ಕ್ರೀಡಾಕೂಟವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಏಕಲವ್ಯ ಪ್ರಶಸ್ತಿ ವಿಜೇತ, ಅಂತಾರಾಷ್ಟ್ರೀಯ ನೆಟ್ ಬಾಲ್ ಕ್ರೀಡಾಪಟು ನಿತಿನ್ ಪಿ. ಅವರು ಉದ್ಘಾಟಿಸಲಿದ್ದು, ಬೆಳಗ್ಗೆ 10 ಗಂಟೆಗೆ ಕಾಲೇಜಿನ ಕ್ರೀಡಾ ಆವರಣದಲ್ಲಿ ಈ ಕಾರ್ಯಕ್ರಮ ನೇರವೇರಲಿದೆ. ಸಂಜೆ 4.30 ಗಂಟೆಗೆ ಸಮಾರೋಪ ಸಮಾರಂಭ ಹಾಗೂ ವಿಜೇತ ತಂಡಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಮಾರೋಪ ಸಮಾರಂಭಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಲ್ಲದೇ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಅವರು ವಹಿಸಲಿದ್ದಾರೆ. ಅಲ್ಲದೇ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕೇಶವ ಮೂರ್ತಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ