'ಆ ಮೂಲಕ ನವದುರ್ಗೆಯರನ್ನು ಪೂಜಿಸುವ ನರೇಂದ್ರ ಮೋದಿಯವರಿಗೆ ಆಶೀರ್ವಾದ ಮಾಡಿ'
ಮಂಗಳೂರು: ಬಿಜೆಪಿ ಪುತ್ತೂರು ಮಂಡಲ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಮುಂಬರುವ ಚುನಾವಣೆಯಲ್ಲಿ ಪ್ರತಿ ಬೂತಿನಲ್ಲಿ 9 ಮಹಿಳೆಯರು ಬೆಳಗ್ಗೆ ಮೊದಲು ಮತ ಚಲಾಯಿಸುವ ಮೂಲಕ ನವದುರ್ಗೆಯರ ಆರಾಧಕ ಸನ್ಮಾನ್ಯ ನರೇಂದ್ರ ಮೋದಿಯವರಿಗೆ ಆಶೀರ್ವಾದ ಮಾಡುವಂತೆ ಕರೆ ನೀಡಿದರು.
ರಾಷ್ಟ್ರದ ಅಭ್ಯುದಯಕ್ಕಾಗಿ ಹಗಲಿರುಳು ಕೆಲಸ ಮಾಡುತ್ತಿರುವ ಅದರಲ್ಲೂ ವಿಶೇಷವಾಗಿ ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಮಹತ್ತರ ಯೋಜನೆಗಳನ್ನು ಜ್ಯಾರಿಗೊಳಿಸಿ ಕಾರ್ಯಗತ ಮಾಡಿರುವ ಸನ್ಮಾನ್ಯ ನರೇಂದ್ರ ಮೋದಿಯವರಿಗೆ ಶಕ್ತಿಯನ್ನು ಆರಾಧಿಸುವ ತುಳುನಾಡಿನ ಮಣ್ಣಿನಿಂದ ಶಕ್ತಿ ತುಂಬುವ ಕೆಲಸ ಮಾಡಬೇಕಾಗಿದೆ ಎಂದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ