ಬಿಐಎಎಲ್ ಜತೆ ಏರ್‍ಇಂಡಿಯಾ ಒಪ್ಪಂದ

Upayuktha
0


ಮಂಗಳೂರು: ಭಾರತದ ಪ್ರಮುಖ ಜಾಗತಿಕ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ಮತ್ತು ಬೆಂಗಳೂರು ಇಂಟರ್ ನ್ಯಾಷನಲ್ ಏರ್‍‌ಫೋರ್ಟ್ ಲಿಮಿಟೆಡ್ (ಬಿಐಎಎಲ್) ದಕ್ಷಿಣ ಭಾರತದ ಪ್ರಮುಖ ವಾಯುಯಾನ ಕೇಂದ್ರವಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಲು ಮಹತ್ವದ ಒಪ್ಪಂದ ಮಾಡಿಕೊಂಡಿವೆ.


ಈ ಮೂಲಕ ಭಾರತದಲ್ಲಿ ಮುಂದಿನ ಕೆಲವು ವರ್ಷಗಳಲ್ಲಿ ವಿಮಾನಯಾನ ಸಂಪರ್ಕವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಈ ಒಪ್ಪಂದವು ಭಾರತೀಯ ವಾಯುಯಾನ ಉದ್ಯಮದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಏರ್ ಇಂಡಿಯಾ ಮತ್ತು ಬಿಐಎಎಲ್ ಮುಂದಿನ ಐದು ವರ್ಷಗಳಲ್ಲಿ ಅಂತಾರಾಷ್ಟ್ರೀಯ ಸಂಪರ್ಕ, ಕಾರ್ಯಾಚರಣೆಯ ದಕ್ಷತೆ ಮತ್ತು ಪ್ರಯಾಣಿಕರ ಅನುಭವವನ್ನು ಹೆಚ್ಚಿಸಲು ಸಹಕರಿಸುತ್ತದೆ ಎಂದು ಏರ್ ಇಂಡಿಯಾ ಎಂಡಿ & ಸಿಇಒ ಕ್ಯಾಂಪ್‍ಬೆಲ್ ವಿಲ್ಸನ್ ಮತ್ತು ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.


ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವರ್ಧಿತ ನೆಟ್‍ವರ್ಕ್ ಮೂಲಕ ಟಾಟಾ ಗ್ರೂಪ್ ಏರ್‍ಲೈನ್ಸ್, ಏರ್ ಇಂಡಿಯಾ ಮತ್ತು ವಿಸ್ತಾರಾ ಪ್ರೀಮಿಯಂ ಹಾಗೂ ಪ್ರಯಾಣಿಕರಿಗೆ ಮೀಸಲಾದ ದೇಶೀಯ ವಿಶ್ರಾಂತಿ ಕೋಣೆಯನ್ನು ಸ್ಥಾಪಿಸುವುದು ಸೇರಿದಂತೆ ಇತರೆ ಸೌಕರ್ಯಗಳನ್ನು ಒಳಗೊಂಡಿದೆ.


ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಿಂದ ನೇರ ದೀರ್ಘ-ಪ್ರಯಾಣದ ಮಾರ್ಗಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತನ್ನ ಜಾಗತಿಕ ಹೆಜ್ಜೆಗುರುತನ್ನು ವಿಸ್ತರಿಸುತ್ತಿದೆ. ಜತೆಗೆ  ರಾಜ್ಯದಲ್ಲಿ ಹೆಚ್ಚು ನುರಿತ ವ್ಯಕ್ತಿಗಳಿಗೆ 1,200 ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top