ಮಂಗಳೂರು: ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ನೂತನ ಅಧ್ಯಕ್ಷರಾಗಿ ಗುತ್ತಿಗಾರು ಕಮಿಲದ ಮಹೇಶ್ ಪುಚ್ಚಪ್ಪಾಡಿ ಹಾಗೂ ಕಾರ್ಯದರ್ಶಿಯಾಗಿ ಕೋಡಪದವು ಕೆಲಿಂಜದ ವೆಂಕಟಗಿರೀಶ್ ಸಿ.ಜಿ. ಆಯ್ಕೆಯಾಗಿದ್ದಾರೆ.
ಈಚೆಗೆ ನಡೆದ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಶಂ. ನಾ. ಖಂಡಿಗೆ, ಪೆರ್ಲ, ಎಂ.ಡಿ. ವಿಜಯಕುಮಾರ್ ಮಡಪ್ಪಾಡಿ ಹಾಗೂ ಜತೆ ಕಾರ್ಯದರ್ಶಿಯಾಗಿ ಸಾಯಿಶೇಖರ್ ಕರಿಕಳ, ಪಂಜ ಆಯ್ಕೆಯಾದರು.
ಸಂಘದ ನಿಕಟಪೂರ್ವ ಅಧ್ಯಕ್ಷ ಅಶೋಕ್ ಕಿನಿಲ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು 1965ರಲ್ಲಿ ಸ್ಥಾಪನೆಯಾದ ಸಂಸ್ಥೆಯಾಗಿದೆ. ವಿವಿಧ ಸಂದರ್ಭಗಳಲ್ಲಿ ಅಡಿಕೆ ಬೆಳೆಗಾರರ ಪರವಾಗಿ ಸಂಘವು ಧ್ವನಿ ಎತ್ತಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ