ಖೋ-ಖೋ: ಆಳ್ವಾಸ್ ಕಾಲೇಜು ಚಾಂಪಿಯನ್

Upayuktha
0

 


ವಿದ್ಯಾಗಿರಿ: ಇಲ್ಲಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಪ್ರಿಲ್ 5 ಮತ್ತು 6ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಖೋ-ಖೋ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿ ಪಡೆದಿದೆ. 


ಪುರುಷರ ಫೈನಲ್ ಪಂದ್ಯದಲ್ಲಿ ಆತಿಥೇಯ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಮಣಿಸಿದ ಆಳ್ವಾಸ್ ಕಾಲೇಜು ಸತತ 16ನೇ ಬಾರಿ  ಚಾಂಪಿಯನ್ ಆಯಿತು. 


ಮಹಿಳೆಯರ ವಿಭಾಗದಲ್ಲೂ ಆತಿಥೇಯ ಕಾಲೇಜನ್ನು ಫೈನಲ್‌ನಲ್ಲಿ ಮಣಿಸಿದ ಆಳ್ವಾಸ್ ಕಾಲೇಜು ಮಹಿಳಾ ತಂಡವು 12ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿತು. 


ಒಟ್ಟು ಪುರುಷರ ವಿಭಾಗದಲ್ಲಿ 20 ತಂಡಗಳು ಹಾಗೂ ಮಹಿಳೆಯರ ವಿಭಾಗದಲ್ಲಿ 18 ತಂಡಗಳು ಭಾಗವಹಿಸಿದ್ದವು.  ಇದರಲ್ಲಿ ಚಾಂಪಿಯನ್ ಶಿಪ್ ರೌಂಡ್ ನ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಪುರುಷರ ತಂಡವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ತಂಡವನ್ನು ಮಣಿಸಿ ಸತತ 16ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿತು 


ವಿಜೇತ ತಂಡದ ಆಟಗಾರರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ. 



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top