ಟ್ಯೂನಿಷಿಯದ ಐ-ಫೆಸ್ಟ್ 2024ರಲ್ಲಿ ಆಳ್ವಾಸ್ ವಿದ್ಯಾರ್ಥಿಗೆ ಬಹುಮಾನ

Upayuktha
0



ಮೂಡುಬಿದಿರೆ: ಇತ್ತೀಚಿಗೆ ಆಫ್ರಿಕಾದ ಟ್ಯೂನಿಷಿಯ ದೇಶದಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಹಾಗೂ ಆಫ್ರಿಕಾದ ಅತೀ ದೊಡ್ಡ ವಿಜ್ಞಾನ ಇಂಜಿನಿಯರಿಂಗ್ ತಂತ್ರಜ್ಞಾನ ಸಮ್ಮೇಳನ ಐ-ಫೆಸ್ಟ್ 2024ರಲ್ಲಿ ಮೂಡಬಿದಿರೆಯ ಆಳ್ವಾಸ್ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಅಮೋಘ ಹೆಬ್ಬಾರ್ ಪ್ರದರ್ಶಿಸಿದ ವಿಜ್ಞಾನ ಪ್ರಾಜೆಕ್ಟ್‌ಗೆ ಬೆಳ್ಳಿ ಪದಕ ಲಭಿಸಿದೆ. 


ಈ ಸಮ್ಮೇಳನದಲ್ಲಿ ವಿಶ್ವದ ಸುಮಾರು 35 ದೇಶಗಳಿಂದ 400ಕ್ಕೂ ಅಧಿಕ ವಿದ್ಯಾರ್ಥಿಗಳು ವಿವಿಧ ವೈಜ್ಞಾನಿಕ ಪ್ರಾಜೆಕ್ಟ್‌ಗಳನ್ನು ಪ್ರದರ್ಶಿಸಿದ್ದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಅಜಿತ್ ಹೆಬ್ಬಾರ್ ಮಾರ್ಗದರ್ಶನ ನೀಡಿದ್ದರು. ಈ ಹಿಂದೆ ಸೈನ್ಸ್ ಸೊಸೈಟಿ ಆಫ್ ಇಂಡಿಯಾ ವತಿಯಿಂದ ನಡೆದ ವಿಜ್ಞಾನ ಮೇಳದಲ್ಲಿ ಗೆಲ್ಲುವುದರ ಮೂಲಕ ಅಮೋಘ ಹೆಬ್ಬಾರ್ ಅಂತರಾಷ್ಟ್ರೀಯ ಮಟ್ಟದ ಈ ಸಮ್ಮೇಳನಕ್ಕೆ ಆಯ್ಕೆಯಾಗಿದ್ದರು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ವಿದ್ಯಾರ್ಥಿಯ ಸಾಧನೆಯನ್ನು ಶ್ಲಾಘಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top