ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪುಣ್ಯಕ್ಷೇತ್ರಗಳ‌ ಸಂದರ್ಶನ

Upayuktha
0


ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಶುಕ್ರವಾರ ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವಾರು ಪುಣ್ಯಕ್ಷೇತ್ರಗಳ ದರ್ಶನ ಪಡೆದರು. ಸಸಿಹಿತ್ಲು ಕರ್ಕೇರ ಕುಟುಂಬಸ್ಥರ ಮೂಲಸ್ಥಾನದ ಶ್ರೀ ನಾಗಬ್ರಹ್ಮ ಹಾಗೂ ಪರಿವಾರ ದೈವಗಳ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದರು. ಬಳಿಕ ಸುರತ್ಕಲ್ ವೀರಭದ್ರ ಮಹಾಮಾಯಿ ದೇವಸ್ಥಾನ, ಸುರತ್ಕಲ್ ಪುರಾತನ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನಡೆಯುತ್ತಿರುವ ಚಂಡಿಕಾಯಾಗದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.


ಅಲ್ಲಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಪಣಂಬೂರು ದೊಡ್ಡಮನೆ ಶ್ರೀ ಕಾಂತು ಶೆಟ್ಟಿಗಾರ ಕುಟುಂಬಸ್ಥರ ಧರ್ಮನೇಮೋತ್ಸವಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಮಧ್ಯಾಹ್ನ ಬಂಟ್ವಾಳ ತಾಲೂಕಿನ ನಿಟಿಲಾಕ್ಷ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸಂಜೆ ಬಾಳ್ತಿಲ ಕುಂದಾಯ ರಕ್ತೇಶ್ವರಿ ದೇವಸ್ಥಾನ, ಕಶೆಕೋಡಿ ದೇವಸ್ಥಾನಕ್ಕೆ ತೆರಳಿ ಪ್ರಸಾದ ಸ್ವೀಕರಿಸಿದರು.





Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top