|ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946
ಉಪಯುಕ್ತ ನ್ಯೂಸ್- ಉತ್ಪ್ರೇಕ್ಷೆಯಿಲ್ಲದ ಸುದ್ದಿಗಳ, ಲಕ್ಷಾಂತರ ಓದುಗರ ವಿಶ್ವಾಸಾರ್ಹ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಪ್ರಧಾನಿ ಮೋದಿ ಕೈ ಬಲಪಡಿಸಲು ಬಿಜೆಪಿ ಸಹಕಾರಿ ಪ್ರಕೋಷ್ಠದ ಕರೆ

ಪ್ರಧಾನಿ ಮೋದಿ ಕೈ ಬಲಪಡಿಸಲು ಬಿಜೆಪಿ ಸಹಕಾರಿ ಪ್ರಕೋಷ್ಠದ ಕರೆ

 


ಮಂಗಳೂರು: ಎಪ್ರಿಲ್ 26ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಸದಸ್ಯರಾಗಿರುವ ಜಿಲ್ಲೆಯ ಎಲ್ಲಾ ಸಹಕಾರಿಗಳೂ ಸಕ್ರಿಯರಾಗಿ ತೊಡಗಿಸಿಕೊಂಡು ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಬಿಜೆಪಿ ದ.ಕ ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಂಚಾಲಕ ಟಿ.ಜಿ ರಾಜಾರಾಂ ಭಟ್ ಹಾಗೂ ಸಹಸಂಚಾಲಕರಾದ ಶ್ರೀನಿವಾಸ ಶೇಟ್‌ ಮತ್ತು ರಕ್ಷಿತ್ ಶೆಟ್ಟಿ ಅವರು  ಮನವಿ ಮಾಡಿದ್ದಾರೆ.


ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,  ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್.ಡಿ.ಎ. ಸರಕಾರವನ್ನು 400ಕ್ಕಿಂತಲೂ ಹೆಚ್ಚು ಸ್ಥಾನಗಳೊಂದಿಗೆ ಮರಳಿ ಅಧಿಕಾರಕ್ಕೆ ತರುವಲ್ಲಿ ಸಹಕಾರಿಗಳು ಪ್ರಯತ್ನಿಸಬೇಕೆಂದು ಹೇಳಿದರು. 


ನೂರಾರು ವರ್ಷಗಳ ಇತಿಹಾಸವಿರುವ ದೇಶದ ಆರ್ಥಿಕತೆಯ ಬೆಳವಣಿಗೆಯಲ್ಲಿ ಪ್ರಧಾನ ಪಾತ್ರವಹಿಸುತ್ತಿರುವ ಸಹಕಾರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರದಲ್ಲಿ ಸಹಕಾರಿ ಸಚಿವಾಲಯವನ್ನು ಸ್ಥಾಪಿಸಿ ಗೃಹ ಸಚಿವ ಅಮಿತ್ ಷಾ ರವರನ್ನು ಸಹಕಾರಿ ಮಂತ್ರಿಗಳಾಗಿ ನೇಮಕ ಮಾಡುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಹೊಸತನದ ಸಂಚಲನ ಉಂಟುಮಾಡಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ದೇಶವ್ಯಾಪಿಯಾಗಿ ಒಂದು ದೇಶ ಒಂದೇ ಬೈಲಾ ಮತ್ತು ಒಂದು ದೇಶ ಒಂದೇ ಸಾಫ್ಟ್‌ವೇರ್ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಈ ದೇಶದ ಎಲ್ಲಾ ಸಹಕಾರಿ ಸಂಘಗಳನ್ನು ಏಕರೂಪಕ್ಕೆ ತಂದಿದ್ದಾರೆ. ಆ ಮೂಲಕ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ  ಸಹಕಾರಿ ಸಚಿವ ಅಮಿತ್ ಷಾರವರು ಕಾರಣರಾಗಿದ್ದಾರೆ.


ಮೋದಿ ಸರಕಾರವು 2016ರಿಂದ ಜಾರಿಗೆ ತಂದಿರುವ ಪ್ರಧಾನಮಂತ್ರಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಿಂದಾಗಿ ಹವಾಮಾನ ವೈಪರೀತ್ಯದಿಂದ ತಾವು ಬೆಳೆದ ಬೆಳೆ ನಾಶಕ್ಕೆ ಒಳಗಾದ ರೈತರು ಪರಿಹಾರದ ನಿಟ್ಟುಸಿರು ಬಿಡುವಂತಾಗಿದೆ. ಸಹಕಾರ ಸಂಘಗಳ ಮೂಲಕ ರೈತರಿಗೆ ಕೊಡಮಾಡುವ ಶೂನ್ಯ ಬಡ್ಡಿದರದ ಅಲ್ಪಾವಧಿ ಬೆಳೆ ಸಾಲದ ಯೋಜನೆಗೆ ಕೇಂದ್ರ ಸರಕಾರ ಶೇಕಡಾ 2ರಷ್ಟು ಬಡ್ಡಿ ಸಹಾಯಧನ ನೀಡುವ ಮೂಲಕ ರೈತರಿಗೆ ಸಹಾಯದ ಕೊಡುಗೆ ನೀಡಿದೆ. ಕೃಷಿ ಚಟುವಟಿಕೆಗಳನ್ನು ಆರಂಭಿಸುವುದಕ್ಕೆ ಅನುಕೂಲವಾಗುವಂತೆ ಉಳುಮೆ, ಬೀಜಬಿತ್ತನೆ ಹಾಗೂ ರಸಗೊಬ್ಬರಗಳ ಖರೀದಿಗಾಗಿ ರೂ.6000/-ಗಳ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಸಹಾಯ ನೀಡುತ್ತಿದೆ. 


ಪ್ರಧಾನಮಂತ್ರಿ ಕಿಸಾನ್ ಮಾನಧನ ಯೋಜನೆ ಮೂಲಕ ನೋಂದಾಯಿತ ರೈತರಿಗೆ ರೂ.3000/-ಗಳ ಮಾಸಿಕ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ದೇಶದಾದ್ಯಂತ 10000 ರೈತ ಉತ್ಪಾದಕ ಸಂಸ್ಥೆಗಳನ್ನು ಆರಂಭಿಸಿ ರೈತರಿಗೆ ಅನುಕೂಲವಾಗುವಂತೆ ಕೇಂದ್ರ ಸರಕಾರದ ಬಜೆಟ್‌ನಲ್ಲಿ ರೂ.6865ಕೋಟಿ ರೂಪಾಯಿಗಳ ನಿಧಿಯನ್ನು ಮೀಸಲಿರಿಸಿದೆ.


ಈ ರೀತಿ ದೇಶದ ಸಮಸ್ತ ಸಹಕಾರಿಗಳು ಹಾಗೂ ರೈತರ ಮೊಗದಲ್ಲಿ ಸಂತಸಕ್ಕೆ ಕಾರಣರಾಗಿರುವ ನರೇಂದ್ರ ಮೋದಿಯವರ ಸರಕಾರವನ್ನು ಮೂರನೆಯ ಅವಧಿಗೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಹಕಾರಿ ಪರಿವಾರದ ಸಂಘಟನೆಗಳಲ್ಲಿ ತೊಡಗಿಸಿಕೊಂಡಿರುವ ಎಲ್ಲಾ ಸ್ತರದ ಸಹಕಾರ ಸಂಸ್ಥೆಗಳ ಪ್ರತಿನಿಧಿಗಳು ಇನ್ನು ಉಳಿದ ದಿನಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕೆಂದು ಸಹಕಾರಿ ಪ್ರಕೋಷ್ಠದ ಸಂಚಾಲಕರು ಕೋರಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

0 Comments

Post a Comment

Post a Comment (0)

Previous Post Next Post