ಮಂಗಳೂರು: ಲೋಕಸಭಾ ಚುನಾವಣೆ 2024 ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ಕಾನೂನು ಪ್ರಕೋಷ್ಠದ ವತಿಯಿಂದ ವಕೀಲರ ಸಮಾವೇಶ ಏ.19ರಂದು ಶುಕ್ರವಾರ ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ಸಂಜೆ 4:00 ಗಂಟೆಗೆ ನಡೆಯಲಿದೆ. ಈ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಷ್ಟ್ರೀಯ ವಕ್ತಾರರು ಹಾಗೂ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯವಾದಿಗಳಾದ ಗೌರವ್ ಭಾಟಿಯಾ ಹಾಗೂ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ಹೈಕೋರ್ಟಿನ ಹಿರಿಯ ನ್ಯಾಯವಾದಿ ವಿವೇಕ್ ಸುಬ್ಬಾರೆಡ್ಡಿ ಅವರು ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸ್ಪರ್ಧಿಸುತ್ತಿದ್ದು, ಈಗಾಗಲೇ ಬಿರುಸಿನ ಪ್ರಚಾರ ಕಾರ್ಯ ನಡೆಯುತ್ತಿದೆ. ವಿವಿದ ಪ್ರಕೋಷ್ಠಗಳ ಸಮಾವೇಶಗಳು ನಡೆದಿದ್ದು, ಶುಕ್ರವಾರದಂದು ವಕೀಲರ ಪ್ರಕೋಷ್ಠದ ಸಮಾವೇಶ ನಿಗದಿಯಾಗಿದೆ ಎಂದು ಬಿಜೆಪಿ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಅವರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ