ಬೀಳಗಿ: ಬಾಡಗಂಡಿಯ ಎಸ್.ಆರ್.ಪಾಟೀಲ ಶಿಕ್ಷಣ ಪ್ರತಿಷ್ಠಾನ (ರಿ) ಬಾಪೂಜಿ ಸ್ವತಂತ್ರ ಪದವಿ ಪೂರ್ವ ವಿದ್ಯಾಲಯ 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ 100 ಕ್ಕೆ 100 ರಷ್ಟು ಫಲಿತಾಂಶ ಬಂದಿದ್ದು, ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಸತತವಾಗಿ 2ನೇ ಬಾರಿಯೂ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶ್ವೇತಾ ಆರ್ ಹೆಬ್ಬಾಳ 600 ಕ್ಕೆ 591 ಅಂಕ ಪಡೆದು ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 8ನೇ ರ‍್ಯಾಂಕ್. ಸಾಕ್ಷಿ ಬೊಸಗಿ 587, ಶ್ರೀಧರ ರೆಡ್ಡಿ 586, ಮಲ್ಲಿಕಾರ್ಜುನ ಬಸರಕೋಡ 585, ಮಯೂರ ಹೆಚ್ ಹಾಗೂ ಸ್ವಾತಿ ಬಗಲಿ 584 ಅಂಕ ಗಳಿಸಿದ್ದಾರೆ ಮತ್ತು 121 ವಿದ್ಯಾರ್ಥಿಗಳಲ್ಲಿ 103 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚಿ ನಮ್ಮ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಎಸ್.ಆರ್. ಪಾಟೀಲ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಎಮ್.ಎನ್. ಪಾಟೀಲ ಪ್ರಾಚಾರ್ಯರಾದ ಶಿವಬೋಧ ಶೆಟ್ಟಿ ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತ ಪಡಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ