ಭಾಜಪ ದ. ಕ. ಜಿಲ್ಲಾ ಚುನಾವಣಾ ಪ್ರಭಾರಿಯಾಗಿ ಕ್ಯಾ. ಗಣೇಶ್ ಕಾರ್ಣಿಕ್ ನೇಮಕ

Upayuktha
0


ಮಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಭಾರತೀಯ ಜನತಾ ಪಕ್ಷ ತನ್ನ ಚುನಾವಣಾ ಪ್ರಭಾರಿಗಳನ್ನು ನೇಮಕ ಮಾಡಿದ್ದು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪ್ರಭಾರಿಯಾಗಿ ವಿಧಾನ ಪರಿಷತ್ತಿನ ಮಾಜಿ ಶಾಸಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.


ಕ್ಯಾ. ಗಣೇಶ್ ಕಾರ್ಣಿಕ್ ಅವರು ಈ ಹಿಂದೆ ಪಕ್ಷದ ರಾಜ್ಯ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅನಿವಾಸಿ ಭಾರತೀಯರ ಘಟಕದ ಸಂಚಾಲಕರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.


ಈ ಹಿಂದೆ ಪ್ರಭಾರಿ ಹುದ್ದೆಗೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಿಸಲಾಗಿತ್ತು. ಆದರೆ ಅವರನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಿಯೋಜಿಸಿರುವುದರಿಂದ ಈ ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಇದೇ ವೇಳೆ ಜಿಲ್ಲಾ ಚುನಾವಣಾ ಸಂಚಾಲಕರಾಗಿ ಹಿರಿಯ ನಾಯಕರಾದ ನಿತಿನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top