ಕಾಂಗ್ರೆಸ್‌ಗೆ ಸೋಲಿನ ಮುನ್ಸೂಚನೆ, ಹತಾಶೆಯಿಂದ ಅಪಪ್ರಚಾರ: ನಂದನ್ ಮಲ್ಯ

Upayuktha
0


ಮಂಗಳೂರು: ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬಿಜೆಪಿ ಹಾಗೂ ಪಕ್ಷದ ಅಭ್ಯರ್ಥಿಯ ವಿರುದ್ಧ ಅಪಪ್ರಚಾರ ಮಾಡಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಂದಾಗಿದ್ದಾರೆ. ಇದರಿಂದಾಗಿ ಅವರಿಗೆ ಸೋಲಿನ ಮುನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಆರೋಪಿಸಿದ್ದಾರೆ.


ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಿದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ತೆರೆಯುವ ಮೂಲಕ ನಿರಂತರವಾಗಿ ಅಪಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೊಡಗಿದ್ದಾರೆ. ಈ ರೀತಿಯ ಅಪಪ್ರಚಾರದಲ್ಲಿ ತೊಡಗಿರುವ  ನಕಲಿ ಖಾತೆಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸುವಂತೆ ಆಗ್ರಹಿಸಿ ಸೈಬರ್ ಕ್ರೈಮ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರಿನ ರೋಡ್ ಶೋನ ಬಗ್ಗೆ ಯುವಕರು ಎದುರು ನೋಡುತ್ತಿದ್ದಾರೆ. ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲ್ಲುವುದು ನಿಶ್ಚಿತ, ಗೆಲುವಿನ ಅಂತರ ಹೆಚ್ಚಿಸುವ ಬಗ್ಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಗಲಿರಳು ದುಡಿಯುತ್ತಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top