ಗ್ಯಾರಂಟಿಗಳಿಂದ ನಾವು ಗೆಲ್ಲುತ್ತೇವೆ ಎನ್ನುವುದು ಭ್ರಮೆ: ಅಣ್ಣಾಮಲೈ ಹೇಳಿಕೆ

Upayuktha
0

 


ಶಿವಮೊಗ್ಗ: ಯಾವುದೇ ಗ್ಯಾರಂಟಿಗಳು ಸರ್ಕಾರವನ್ನು ಉರುಳಿಸುತ್ತವೆ. ಅಥವಾ ಅಧಿಕಾರಕ್ಕೆ ತರುತ್ತವೆ. ಎನ್ನುವುದು ಸುಳ್ಳು. ಚುನಾವಣೆಗಳು ಗ್ಯಾರಂಟಿಗಳ ಮೇಲೆ ನಿಂತಿಲ್ಲ. ಕರ್ನಾಟಕದ ವಿಧಾನಸಭಾ ಚುನಾವಣೆಯೂ ಕೂಡ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಗ್ಯಾರಂಟಿಗಳಿಂದ ಅಲ್ಲ. ಅದಕ್ಕೆ ಬೇರೆ ಬೇರೆ ಕಾರಣಗಳಿವೆ. ಹಾಗಾಗಿ ಅವರು ಭ್ರಮೆಯ ಇದ್ದಾರೆ. ಗ್ಯಾರಂಟಿಗಳಿಂದ ನಾವು ಗೆಲ್ಲುತ್ತೇವೆ ಎನ್ನುವುದು ಸುಳ್ಳು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.


ಗುರುವಾರ ಇಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಬಗ್ಗೆ ಟೀಕೆ ಮಾಡುವವರಿಗೆ ಜೂನ್ ೪ ರಂದು ಉತ್ತರ ಸಿಗುತ್ತದೆ. ಶಿವಮೊಗ್ಗದಲ್ಲಿ ಬಿ.ವೈ. ರಾಘವೇಂದ್ರ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರ ಗೆಲುವು ಖಚಿತವಾಗಿದೆ. ಈಶ್ವರಪ್ಪನವರ ಸ್ಪರ್ಧೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ಅವರ ಬಗ್ಗೆ ನನಗೆ ಗೌರವವಿದೆ. ಆದರೆ ಈ ಚುನಾವಣೆ ನಡೆಯುವುದು ಮೋದಿಗಾಗಿ ಇದು ರಾಷ್ಟ್ರೀಯ ಚುನಾವಣೆ. ಜನರು ಸ್ಥಳೀಯ ನಾಯಕರನ್ನು ನೋಡುವುದಿಲ್ಲ. ರಾಷ್ಟ್ರೀಯ ನಾಯಕರನ್ನು ಮಾತ್ರ ನೋಡುತ್ತಾರೆ. ಕರ್ನಾಟಕದಲ್ಲಿ 28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿಕೂಟ ಗೆಲ್ಲಲಿದೆ ಎಂದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top