ತೀರ್ಥಹಳ್ಳಿ: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವಿನ ವಾತಾವರಣ ಕಂಡುಬಂದಿದ್ದು,ಬಿಜೆಪಿ ಜೆಡಿಎಸ್ ಹೊಂದಾಣಿಕೆಯಿಂದ ಬಿಜೆಪಿಗೆ ಆನೆ ಬಲ ಬಂದಂತಾಗಿದೆ ಎಂದು ಶಾಸಕ,ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಪಟ್ಟಣದ ಶ್ರೀ ರಾಮಮಂದಿರದಲ್ಲಿ ನೆಡೆದ ಜೆಡಿಎಸ್ ಬಿಜೆಪಿ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ರವರ ಗೆಲುವು ಖಚಿತವಾಗಿದ್ದು,ಕಾಂಗ್ರೇಸ್ ಅಭ್ಯರ್ಥಿ ಗೆಲುವಿನ ಸನಿಹವು ಬರುವುದಿಲ್ಲ,ಬಿಜೆಪಿ ಕಾರ್ಯಕರ್ತರು ಯುದ್ದದ ರೀತಿಯಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ ಎಂದರು.
ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅಭಿವೃದ್ಧಿ,ಜನಪರ ಯೋಜನೆಗಳು ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ.ಜಾತಿ,ಧರ್ಮ, ಪಕ್ಷ ಮೀರಿ ಕ್ಷೇತ್ರದ ಜನತೆ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದರು.
ಈಶ್ವರಪ್ಪನವರ ಸ್ಪರ್ಧೆಯಿಂದ ಪಕ್ಷಕ್ಕೆ ಯಾವುದೇ ನಷ್ಠವಿಲ್ಲ,ನನಗೂ ಈಶ್ವರಪ್ಪನವರಿಗೂ ರಾಜಕೀಯ ಹೊರತುಪಡಿಸಿದರೆ ಉತ್ತಮ ಸಂಬಂಧವಿದೆ ಎಂದರು.
ಮೇ.29ರಸೋಮವಾರ ತಾಲೂಕಿನ ಕೋಣಂದೂರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚುನಾವಣಾ ಪ್ರಚಾರಕ್ಕೆ ಆಗಮಿಸಲಿದ್ದಾರೆ.
ಹಾಸನದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರ ಪೆನ್ ಡ್ರೈವ್ ಲೈಂಗಿಕ ಹಗರಣದ ಹಿಂದೆ ಕಾಂಗ್ರೇಸ್ ಪಕ್ಷದ ಷಡ್ಯಂತ್ರವಿದೆ,ರಾಜ್ಯ ಸರ್ಕಾರ ಈಗಾಗಲೇ ತನಿಖೆಗೆ ಆದೇಶಿಸಿದೆ ಎಂದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ