ಚಿತ್ರ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು.
ಉಜಿರೆ: ಶಿಕ್ಷಣ ಮತ್ತು ಉದ್ಯೋಗ ಕೌಶಲದ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರು ಹೇಳಿದರು.
ಅವರು ಸೋಮವಾರ ಉಜಿರೆಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಒಂದು ತಿಂಗಳು ನಡೆದ ಮಹಿಳಾ ಬ್ಯೂಟಿಪಾರ್ಲರ್ ಮತ್ತು ಮದುಮಗಳ ಶೃಂಗಾರ ಮತ್ತು ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು.
ಮಹಿಳೆಯರು ಸೀಮಿತ ವಿಷಯಕ್ಕೆ ಮಾತ್ರ ಅಂಟಿಕೊಳ್ಳದೆ ತಮಗೆ ಸಿಗುವ ಅವಕಾಶಗಳ ಸದುಪಯೋಗ ಪಡೆದು ಉನ್ನತ ಸಾಧನೆ ಮಾಡಬೇಕು. ಕಲಿಕೆ ನಿರಂತರವಾಗಿರಬೇಕು. ಶಿಸ್ತು ಮತ್ತು ಸಮಯಪಾಲನೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ ಅಧ್ಯಕ್ಷತೆ ವಹಿಸಿದರು.
ತರಬೇತುದಾರರಾದ ಮಾಧವಿ ರೈ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಮಾಜಿ ಪ್ರಾದೇಶಿಕ ನಿರ್ದೇಶಕ ಕೆ. ಮಹಾವೀರ ಅಜ್ರಿ ಉಪಸ್ಥಿತರಿದ್ದರು.
ಸಂಸ್ಥೆಯ ನಿರ್ದೇಶಕ ಎಂ. ಸುರೇಶ್ ಸ್ವಾಗತಿಸಿದರು. ಉಪನ್ಯಾಸಕ ಕೆ. ಕರುಣಾಕರ ಜೈನ್ ಧನ್ಯವಾದವಿತ್ತರು. ಹಿರಿಯ ಉಪನ್ಯಾಸಕ ಅಬ್ರಹಾಂಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರು.
70 ಮಂದಿ ಮಹಿಳೆಯರು ತರಬೇತಿಯಲ್ಲಿ ಭಾಗವಹಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ