ಮಂಗಳೂರು: ಮಂಗಳೂರಿನ ಗಾನ ನೃತ್ಯ ಅಕಾಡೆಮಿಯು ಇದೇ ಬರುವ 14ನೇ ತಾರೀಖಿನಂದು ನಂಜೆ 6 ಗಂಟೆಗೆ ಮಂಗಳೂರಿನ ಡಾನ್ ಬಾಸ್ಕೋ ಹಾಲ್ ನಲ್ಲಿ ಚೆನ್ನೈಯ ಪ್ರಖ್ಯಾತ ನೃತ್ಯ ಕಲಾವಿದೆ ಕು. ಹರಿಣಿ ಜೀವಿತಾ ಇವರ ನೃತ್ಯ ಕಾರ್ಯಕ್ರಮವನ್ನು ಏರ್ಪಡಿಸಿದೆ.
ಬಹು ಬೇಡಿಕೆಯ ಕಲಾವಿದೆಯಾದ ಕು. ಹರಿಣಿ ಜೀವಿತಾ ಇವರು ಚೆನ್ನೈಯ ಪ್ರಸಿದ್ದ ನೃತ್ಯ ಸಂಸ್ಥೆ ಶ್ರೀ ದೇವಿ ನೃತ್ಯಾಲಯದ ನಿರ್ದೇಶಕಿ ಡಾ. ಶೀಲಾ ಉನ್ನಿಕೃಷ್ಣನ್ ಇವರ ಶಿಷ್ಯೆಯಾಗಿದ್ದು ದೇಶ ವಿದೇಶಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ನೀಡಿರುತ್ತಾರೆ. ಇವರ ಬಹು ಬೇಡಿಕೆಯ ಏಕ ವ್ಯಕ್ತಿ ನೃತ್ಯ ಕಾರ್ಯಕ್ರಮವಾದ ವರದರಾಜ ಉಪಾಸ್ಮಯೇ ಎಂಬ ವಿಷಯಾಧಾರಿತ ನೃತ್ಯವನ್ನು ಪ್ರದರ್ಶಿಸಲಿದ್ದಾರೆ.
ಈ ಕಾರ್ಯಕ್ರಮವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಜರಗಲಿದ್ದು ವಿಶೇಷ ಪಾಸ್ ಗಳಿಗೆ ಸಂಸ್ಥೆಯ ನಿರ್ದೇಶಕಿ ವಿದ್ಯಾಶ್ರೀ ರಾಧಾಕೃಷ್ಣ ಇವರನ್ನು ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದೆ
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ