ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಮುಖರ ಸಭೆಯು ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜರುಗಿತು. ಜಿಲ್ಲಾ ಲೋಕಸಭಾ ಚುನಾವಣಾ ವೀಕ್ಷಣಾ ಪ್ರವಾಸದಲ್ಲಿರುವ ನಿಕಟಪೂರ್ವ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕಟೀಲ್ ರವರು ಮಂಗಳೂರು ದಕ್ಷಿಣ ಸಭೆಯಲ್ಲಿ ಭಾಗವಹಿಸಿ ಚುನಾವಣೆಯ ಪ್ರಥಮ ಹಂತದ ತಯಾರಿಗಳ ಬಗ್ಗೆ ವರದಿಗಳನ್ನು ಪದಾಧಿಕಾರಿಗಳ ಬಳಿ ಪಡೆದರು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಈ ಬಾರಿಯ ಚುನಾವಣೆ ಅತ್ಯಂತ ಮಹತ್ವದ ಚುನಾವಣೆಯಾಗಿದ್ದು, ಇನ್ನು ಕೇವಲ 18 ದಿನಗಳು ಚುನಾವಣೆಗೆ ಬಾಕಿ ಉಳಿದಿದ್ದು ಕಾರ್ಯಕರ್ತರು ಹಗಲಿರುಳು ದುಡಿದು ನಮ್ಮ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ದಾಖಲೆ ಮತಗಳ ಅಂತರದಿಂದ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಕರೆಕೊಟ್ಟರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಜಿಲ್ಲಾ ಚುನಾವಣಾ ಪ್ರಭಾರಿಗಳಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿಯವರು, ಜಿಲ್ಲಾ ಪ್ರವಾಸ ಪ್ರಮುಖ್, ದೇವದಾಸ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ರಾಕೇಶ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮಹಾಪೌರರಾದ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಮಂಡಲದ ಚುನಾವಣಾ ಪ್ರಭಾರಿಗಳಾದ ರವಿಶಂಕರ್ ಮಿಜಾರ್, ಚುನಾವಣಾ ಸಂಚಾಲಕ ವಿಜಯ್ ಕುಮಾರ್ ಶೆಟ್ಟಿ, ಮಾಜಿ ಸಚಿವ ನಾಗರಾಜ್ ಶೆಟ್ಟಿಯವರು ಮಂಡಲದ ಪದಾಧಿಕಾರಿಗಳು ಶಕ್ತಿಕೇಂದ್ರ ಪ್ರಮುಖರು ಹಾಗೂ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ