ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಕೆ.ಆರ್.ಎಂ.ಎಸ್.ಎಸ್), ಮಂಗಳೂರು ವಿಭಾಗ ಇದರ ವತಿಯಿಂದ ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಶನಿವಾರ "ಯುಗಾದಿ ಉತ್ಸವ" ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸರಸ್ವತಿ ವಂದನೆ, ದೀಪ ಪ್ರಜ್ವಲನ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪರಸ್ಪರ ಬೇವು-ಬೆಲ್ಲ ಹಂಚಿಕೊಳ್ಳುವುದರ ಮೂಲಕ ಯುಗಾದಿ ಹಬ್ಬ ಆಚರಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರೂ ಆಗಿರುವ ಡಾ. ಪ್ರಭಾಕರ ಭಟ್, ಯುಗಾದಿ ಆಚರಣೆಯ ಮಹತ್ವಗಳು, ನಮ್ಮ ದೇಶ ಭಾರತ ಇತರ ದೇಶಗಳಿಗಿಂತ ಹೇಗೆ ಭಿನ್ನ, ಭಾರತೀಯ ಸಂಸ್ಕೃತಿಯನ್ನು ಆಚರಿಸಿ ಮುಂದುವರಿಸುವ ಅಗತ್ಯತೆಯ ಬಗ್ಗೆ ಮಾತನಾಡಿದರು. “ಹಳೆಯ ಕಹಿಯ ಜೊತೆಗೆ ಹೊಸ ಸಿಹಿಯನ್ನು ಸೇರಿಸಿ ಉತ್ಸಾಹದಿಂದ ಹೊಸತೊಂದು ಯುಗಕ್ಕೆ ಮುನ್ನುಗ್ಗಬೇಕು,” ಎಂದು ಅವರು ತಿಳಿಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿದ್ಯಾಭಾರತಿಯ ಪ್ರಾಂತ ಕಾರ್ಯದರ್ಶಿ ವಸಂತ ಮಾಧವ ಶುಭ ಹಾರೈಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಹಾಗೂ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರಕಟ್ಟೆ ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಕಾರ್ಯದರ್ಶಿ ವೆಂಕಟೇಶ್ ನಾಯಕ್ ಧನ್ಯವಾದ ಸಮರ್ಪಿಸಿ, ಸಂಘಟನೆ ಅಧ್ಯಕ್ಷೆ ಡಾ. ಸುಧಾ ಎನ್. ವೈದ್ಯ ಸ್ವಾಗತಿಸಿದರು. ಪ್ರೊ. ಸುಭಾಷಿಣಿ ಶ್ರೀವತ್ಸ ಕಾರ್ಯಕ್ರಮ ನಿರೂಪಿಸಿದರು. ಮಂಗಳೂರು ವಿವಿ ವಲಯದ ಪ್ರಾಧ್ಯಾಪಕ ಬಂಧುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ