ಶಂಕರ ಮಠದಲ್ಲಿ ಬಂಗಾರ ಲೇಪಿತ ಕಂಚಿನ ಕಳಸ ಪ್ರತಿಷ್ಠಾಪನೆ

Upayuktha
0

 ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ನೇತೃತ್ವ



ಮೈಸೂರು: ಅಭಿನವ ಶಂಕರಾಲಯದಲ್ಲಿ ಶುಕ್ರವಾರ ಶಂಕರ ಮಠದ ಶ್ರೀ ಶಾರದಾಂಬಾ ಹಾಗೂ ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಮಹಾಸ್ವಾಮಿಗಳ ಸನ್ನಿಧಿಯಲ್ಲಿ ಕುಂಭಾಭಿಷೇಕ ಮತ್ತು ಶಿಖರ ಕುಂಭಾಭಿಷೇಕ, ಕಳಸ ಪ್ರತಿಷ್ಠಾಪನೆ ಕಾರ್ಯಕ್ರಮಗಳು ವಿಜೃಂಭಣೆಯಿಂದ ನೆರವೇರಿದವು.


ದೇಗುಲದ ಆವರಣದ ಶ್ರೀ ಮಹಾಗಣಪತಿ, ಶ್ರೀ ಸತ್ಯನಾರಾಯಣ ಮತ್ತು ಶ್ರೀ ಶಂಕರಾಚಾರ್ಯರ ಮತ್ತು ಶ್ರೀ ನೃಸಿಂಹ ಭಾರತೀ ತೀರ್ಥರ ಸನ್ನಿಧಿಗಳಲ್ಲಿ ಪೂಜೆ, ಮಂಗಳಾರತಿ ಸಮರ್ಪಿಸಿದ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ, ನಂತರ ದೇಗುಲಕ್ಕೆ 7 ಅಡಿ ಎತ್ತರದ ಬಂಗಾರ ಲೇಪಿತ ಕಂಚಿನ ಕಳಸಕ್ಕೆ ವಿಧಿ ವಿಧಾನಗಳ ಮೂಲಕ ಪೂಜೆ ಸಮರ್ಪಿಸಿದರು.  ಮಠದ ಪ್ರಮುಖರು, ವಿದ್ವಾಂಸರು ಇದ್ದರು.


ಶತಮಾನೋತ್ಸವ ಅಂಗವಾಗಿ ನಿರ್ಮಿಸಿರುವ ‘ಶ್ರೀ ಸಚ್ಚಿದಾನಂದ ವಿಲಾಸ’ ಗುರುಭವನದಲ್ಲಿ  ಸ್ವಾಮೀಜಿ ಪಾದಪೂಜೆ ಸ್ವೀಕಾರ ಮಾಡಿದರು. ಇದೇ ಸಂದರ್ಭ ಪಾದುಕಾ ಪೂಜೆಯೂ ಸಂಪನ್ನಗೊಂಡಿತು. ನಂತರ ಭಕ್ತರಿಗೆ ಫಲ, ಮಂತ್ರಾಕ್ಷತೆ ನೀಡಿದರು.


ನೂರಾರು ಮಾತೆಯರಿಂದ ಸೌಂದರ್ಯ ಲಹರೀ ಪಾರಾಯಣ ನಡೆಯಿತು. ಎಲ್ಲರಿಗೂ ತೀರ್ಥ ಪ್ರಸಾದ ವಿತರಣೆ ನೆರವೇರಿತು.


* ಮಂತ್ರಾಕ್ಷತೆ ಅನುಗ್ರಹ:

ಏ. 6ರ ಬೆಳಗ್ಗೆ 9ಕ್ಕೆ ಜಗದ್ಗುರುಗಳು ಸಾರ್ವಜನಿಕ ದರ್ಶನ ನೀಡಿ, ಪಾದಪೂಜೆ ಮತ್ತು ಭಿಕ್ಷಾ ವಂದನೆ ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭ ಅವರು ಶಿಷ್ಯರಿಗೆ, ಭಕ್ತರಿಗೆ ಫಲ ಮಂತ್ರಾಕ್ಷತೆಯನ್ನು ಅನುಗ್ರಹಿಸಿ ಪ್ರಯಾಣ ಮುಂದುವರಿಸಲಿದ್ದಾರೆ ಎಂದು ಅಭಿನವ ಶಂಕರಾಲಯದ ಧರ್ಮಾಧಿಕಾರಿ ಎಚ್. ರಾಮಚಂದ್ರನ್ ತಿಳಿಸಿದ್ದಾರೆ.


* ಇಂದು ಸಂಗೀತ

6ರಂದು ಖ್ಯಾತ ಕಲಾವಿದೆ ಅಪರ್ಣಾ ಪಂಡಿತ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಆಯೋಜನೆಗೊಂಡಿದೆ. ರೂಪನಗುಡಿ ರತ್ನತೇಜ ಪಿಟೀಲು ಮತ್ತು ಪ್ರಣವ ಸುಬ್ರಹ್ಮಣ್ಯ ಅವರು ಮೃದಂಗ  ಪಕ್ಕವಾದ್ಯ ಸಹಕಾರ ನೀಡಲಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top