ಬೆಂಗಳೂರು: ಅಯೋಧ್ಯೆಯಲ್ಲಿ ನಡೆದ 2024-25ರ ರಾಷ್ಟ್ರಮಟ್ಟದ ಸಂಸ್ಕೃತ ಸ್ಪರ್ಧೆಯಲ್ಲಿ ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ಪ್ರಮತಿ ಪ್ರಥಮ ಬಹುಮಾನದ ಜೊತೆಗೆ ಚಿನ್ನದ ಪದಕ ಪಡೆದಿದ್ದಾಳೆ. 32 ವಿವಿಧ ರೀತಿಯ ಸ್ಪರ್ಧೆಗಳು ನಡೆದಿದ್ದವು. ಮೂಲತಃ ನೆಲ್ಲೂರಿನವಳಾದ ಈಕೆ ಅದಕ್ಕೆ ಮೊದಲು ತಮಿಳುನಾಡಿನ ರಾಜ್ಯ ಮಟ್ಟದ ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಪುರಸ್ಕಾರ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಳು. ಗುರುಗಳಾದ ಹರೀಶ್ ಗುತ್ತಲ್ ಈಕೆಯನ್ನು ಈ ಸ್ಪರ್ಧೆಗೆ ಅಣಿಗೊಳಿಸಿದ್ದರು. ಈಕೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಧ್ಯಾಪಕ ಶ್ರವಣಾಚಾರ್ ಹಾಗೂ ಸುಶೀಲ ದಂಪತಿಗಳ ಪುತ್ರಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ