ನಿಟ್ಟೆ: ಬಿ.ಸಿ.ಆಳ್ವ ಸ್ಮಾರಕ ಟ್ರೋಫಿ ಟಿ-20 ಕ್ರಿಕೆಟ್ ಪಂದ್ಯಾವಳಿಯನ್ನು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಆಯೋಜಿಸಿತ್ತು. ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಉಡುಪಿ ಮತ್ತು ಮಂಗಳೂರು ಜಿಲ್ಲೆಯ 16 ಕಾಲೇಜುಗಳ ತಂಡಗಳು ಭಾಗವಹಿಸಿದ್ದವು. ಪಂದ್ಯಾವಳಿಯನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಉದ್ಘಾಟಿಸಿದರು. ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಪ್ರೊ.ಎ.ಯೋಗೀಶ್ ಹೆಗ್ಡೆ ಮತ್ತು ಕ್ರೀಡಾ ಆಡಳಿತಾಧಿಕಾರಿ ಶ್ಯಾಮ್ ಸುಂದರ್ ಎಂ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಎಪ್ರಿಲ್ 4ರಂದು ನಡೆದ ಸೆಮಿಫೈನಲ್ ನಲ್ಲಿ ಮಂಗಳೂರಿನ ಯೆನೆಪೋಯ ಮೆಡಿಕಲ್ ಕಾಲೇಜು ತಂಡ ಬ್ರಹ್ಮಾವರದ ಎಸ್ ಎಂಎಸ್ ಕಾಲೇಜು ತಂಡದ ವಿರುದ್ಧ 8 ರನ್ ಗಳಿಂದ ಹಾಗೂ ನಿಟ್ಟೆಯ ತಾಂತ್ರಿಕ ಕಾಲೇಜಿನ ತಂಡವು ಮಂಗಳೂರಿನ ಯೆನೆಪೋಯ ಅಲೈಡ್ ಹೆಲ್ತ್ ಸೈನ್ಸಸ್ ವಿರುದ್ಧ 41 ರನ್ ಗಳಿಂದ ಜಯ ಸಾಧಿಸಿತು.
ಏಪ್ರಿಲ್ 7, 2024 ರಂದು ನಡೆದ ಫೈನಲ್ ನಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ತಂಡವು ಮಂಗಳೂರಿನ ಯೆನೆಪೋಯ ವೈದ್ಯಕೀಯ ಕಾಲೇಜು ವಿರುದ್ಧ 3 ವಿಕೆಟ್ ಗಳಿಂದ ಗೆದ್ದು ಪಂದ್ಯಾವಳಿಯ ಚಾಂಪಿಯನ್ ಶಿಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಬಹುಮಾನ ವಿತರಣಾ ಸಮಾರಂಭದಲ್ಲಿ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಲುಂಕರ್ ಮತ್ತು ನಿರ್ದೇಶಕ ಪ್ರೊ.ಎ.ಯೋಗೀಶ್ ಹೆಗ್ಡೆ ವಿಜೇತರು ಮತ್ತು ಆಟಗಾರರಿಗೆ ಟ್ರೋಫಿಗಳನ್ನು ವಿತರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ