ನಿಟ್ಟೆ ಪ್ರಥಮ ದರ್ಜೆ ಕಾಲೇಜಿನಲ್ಲಿ 'ವ್ಯಕ್ತಿತ್ವ ವಿಕಸನ' ಕಾರ್ಯಾಗಾರ

Upayuktha
0


ನಿಟ್ಟೆ: ನಿಟ್ಟೆ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಎಂಬ ವಿಷಯದ ಒಂದು ದಿನದ ಕಾರ್ಯಾಗಾರ, ಐಕ್ಯೂಏಸಿ ಮತ್ತು NSS ಘಟಕದಿಂದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಚಿತ್ ಕೋಟ್ಯಾನ್ ಇವರು ಆಗಮಿಸಿದ್ದರು. ಇವರು ಜೀವನದ ಮೌಲ್ಯದ ಕುರಿತು ವಿದ್ಯಾರ್ಥಿಗಳಿಗೆ ಬೋಧನೆಯನ್ನು ನೀಡಿದರು.


ಹಾಗೂ ಕಾಲೇಜಿನ ಪ್ರಾಂಶುಪಾಲೆ ಡಾ. ವೀಣಾ ಕುಮಾರಿ ಬಿಕೆ ಇವರು ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಎನ್.ಎಸ್.ಎಸ್ ಯೋಜನೆಯ ಅಧಿಕಾರಿಗಳಾದ ದಿವ್ಯಾಕ್ಷ ಪ್ರಭು ಮತ್ತು ಎನ್.ಎಸ್.ಎಸ್ ಯೋಜನೆಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಹಿಮಾನಿ ಮೆಂಡೋನ್ಸ ಇವರು ಸ್ವಾಗತಿಸಿದರು. ವಿದ್ಯಾರ್ಥಿ ರಕ್ಷಿತಾ ಇವರು ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಸಾಕ್ಷಿ ಶೆಟ್ಟಿ ಇವರು ಸರ್ವರನ್ನೂ ವಂದಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top