ಪ್ರಧಾನಿ ಮೋದಿ ರೋಡ್‌ ಶೋಗೆ ತಯಾರಿ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಿದ್ಧತಾ ಸಭೆ

Upayuktha
0


ಮಂಗಳೂರು: ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣದ ಪ್ರಮುಖರ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು.


ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಕ್ಷ ಚಟುವಟಿಕೆಗಳು ಭರದಿಂದ ಸಾಗಿವೆ. ಇಂತಹ ಸಂದರ್ಭದಲ್ಲಿ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವುದು ಇಡೀ ಜಿಲ್ಲೆಯ ಪಕ್ಷದ ಪ್ರಮುಖರಾದಿಯಾಗಿ ಕಾರ್ಯಕರ್ತ ಬಂಧುಗಳಲ್ಲಿ ಮಿಂಚಿನ ಸಂಚಲನ ಮೂಡಿಸಿದೆ. ನಾವೆಲ್ಲರೂ ಸರ್ವ ರೀತಿಯ ಜವಾಬ್ದಾರಿಗಳನ್ನು ವಹಿಸಿಕೊಂಡು ನಮೋ ರೋಡ್ ಶೋ ನ ಸಂಪೂರ್ಣ ಯಶಸ್ಸಿಗೆ ಸಹಕರಿಸೋಣವೆಂದು ಕರೆ ನೀಡಿದರು.


ಈ ಸಭೆಯಲ್ಲಿ ರಮೇಶ್ ಕಂಡೆಟ್ಟು, ವಿಜಯ್ ಕುಮಾರ್ ಶೆಟ್ಟಿ, ಮೋನಪ್ಪ ಭಂಡಾರಿ, ರಾಕೇಶ್ ರೈ ಸೇರಿದಂತೆ ಪಕ್ಷದ ಅನೇಕ ಪ್ರಮುಖರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top