ದಕ್ಷಿಣ ಕನ್ನಡ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ನಂಟು ದಶಕಗಳ ಹಳೆಯದ್ದು: ಎನ್.ಯೋಗೀಶ್ ಭಟ್

Upayuktha
0


ಮಂಗಳೂರು: ಮಂಗಳೂರು ನಗರದ ಅಭಿವೃದ್ಧಿಗಾಗಿ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಕೇಂದ್ರ ಸರ್ಕಾರದಿಂದ ಕರಾವಳಿ ಪ್ರದೇಶಕ್ಕೆ ರಾಷ್ಟ್ರೀಯ ಹೆದ್ಧಾರಿ ಅಭಿವೃದ್ಧಿ ಹಾಗೂ ʻಸ್ಮಾರ್ಟ್ ಸಿಟಿ ಯೋಜನೆʼಯಡಿ ನೂರಾರು ಕೋಟಿ ರೂಗಳ ಅನುದಾನ ಹರಿದು ಬಂದಿದೆ, ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಗೆ ಅನೇಕ ಜನಪರ ಯೋಜನೆಗಳ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಮಾಜಿ ಉಪಾಧ್ಯಕ್ಷರಾದ ಎನ್ ಯೋಗೀಶ್ ಭಟ್ ಹೇಳಿದರು.

    

ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ನ ಮುಖ್ಯಮಂತ್ರಿಯಾಗುವುದಕ್ಕೂ ಮುಂಚಿನಿಂದಲೂ  ಮಂಗಳೂರಿನ ಜೊತೆ ಅವಿನಾಭಾವದ ನಂಟಿರುವುದನ್ನು ಸ್ಮರಿಸಿದ ಅವರು, ಇತ್ತೀಚೆಗೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲು ಭೇಟಿ ನೀಡಿದ ಸಂದರ್ಭದಲ್ಲಿ ಸ್ವತಃ ಮೋಡಿಯವರೇ ನನ್ನ ಬಳಿ ಬಂದು ʻಕೈಸಾ ಹೋ ಭಟ್ ಜೀʼ ಎಂದು ವಿಚಾರಿಸಿದ್ದು ನನಗೆ ಅತೀವ ಸಂತೋಷವನ್ನುಂಟು ಮಾಡಿದೆ ಎಂದು ಶ್ಲಾಘಿಸಿದ್ದಾರೆ.


ಸ್ವಾತಂತ್ರ್ಯಾ ನಂತರದಲ್ಲಿ ಪ್ರಧಾನಿ ನೆಹರುರವರ ಕಾಲಾವಧಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಂಬಂಧಪಟ್ಟಂತೆ ತೆಗೆದುಕೊಂಡ ತಪ್ಪು ನಿರ್ಧಾರದಿಂದಾಗಿ ಸಾವಿರಾರು ಕಾಶ್ಮೀರಿ ಪಂಡಿತರ ಹತ್ಯೆಯಾಯಿತು, ಮೋದಿಯವರ ಆಡಳಿತಾವಧಿಯಲ್ಲಿ ಆರ್ಟಿಕಲ್‌  370ರ ರದ್ದತಿಯಂತಹ ಕಠಿಣ ನಿಲುವುಗಳನ್ನು  ಕಾಂಗ್ರೆಸ್‌ ಪಕ್ಷ ಸಂವಿಧಾನ ಬದಲಾಯಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಅನಗತ್ಯ ಗೊಂದಲ ಹುಟ್ಟುಹಾಕುತ್ತಿದೆ ಎಂದು ಆರೋಪಿಸಿದರು.


ಕರಾವಳಿ ಪ್ರದೇಶವು ಬಿಜೆಪಿಯ ಭದ್ರಕೋಟೆಯಾಗಿದ್ದು, ಮೂರು ದಶಕಗಳಿಂದಲೂ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನಿರಂತರವಾಗಿ ಗೆಲ್ಲಲು ಪಕ್ಷದ ಅಭಿವೃದ್ಧಿಯ ಬದ್ಧತೆಯೇ ಕಾರಣ. ದೇಶದ ಸೇವೆಗೆ ತನ್ನದೇ ಆದ ಕೊಡುಗೆ ನೀಡಿರುವ ಯೋಧ ಹಾಗೂ ಪಕ್ಷದಲ್ಲಿ ದಶಕಗಳ ಕಾಲ ವಿವಿಧ ಸ್ಥರದ ಜವಾಬ್ಧಾರಿಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿರುವ ಪಕ್ಷದ ಶಿಸ್ತಿನ ಸಿಪಾಯಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನಾಗಿಸಿದೆ. ಮೋದಿಯವರ ಹತ್ತು ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನಾಧರಿಸಿ ಸುಶಿಕ್ಷಿತ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಲು ಜಿಲ್ಲೆಯ ಮತದಾರರಲ್ಲಿ ಮನವಿ ಮಾಡಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top