ಪಿಯು ಫಲಿತಾಂಶ: ಕರಾವಳಿ ಜಿಲ್ಲೆಗಳ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಭಿನಂದನೆ

Upayuktha
0

 


ಮಂಗಳೂರು: ಈ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ, ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಹಾಗೂ ಕಠಿಣ ಪರಿಶ್ರಮದ ಮೂಲಕ ಖ್ಯಾತಿ ತಂದ ವಿದ್ಯಾರ್ಥಿಗಳನ್ನು ಹಾಗೂ ಅವರ ಪೋಷಕರನ್ನು ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ. 


ರಾಜ್ಯಕ್ಕೇ ಮಾದರಿಯಾಗಬಲ್ಲ ಶೈಕ್ಷಣಿಕ ಪರಂಪರೆಯನ್ನು ಹೊಂದಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ನೀಡಿದ ಕೊಡುಗೆಯನ್ನು ಅತ್ಯಂತ ಕೃತಜ್ಞತೆಗಳಿಂದ ಸ್ಮರಿಸುತ್ತಾ, ಮುಂದಿನ ದಿನಗಳಲ್ಲೂ ಈ ಸಾಧನೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ವಿನಂತಿಸಿದ್ದಾರೆ. ಅದ್ಬುತ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಭಗವಂತ ಯಶಸ್ಸನ್ನು ಹಾಗೂ ಉಜ್ವಲ ಭವಿಷ್ಯವನ್ನು ದಯಪಾಲಿಸಲಿ ಎಂದು ಅವರು ಪತ್ರಿಕಾ ಪ್ರಕಟಣೆಯ ಮೂಲಕ ಹಾರೈಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top