ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‌ಗೆ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ

Upayuktha
0


ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣಕ್ಕೆ ಶನಿವಾರ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ದಂಪತಿ ಹಾಗೂ ಪುತ್ರ ಶ್ರೀಕೃಷ್ಣ ನಟ್ಟೋಜ ದೇವರನ್ನು ಬರಮಾಡಿಕೊಂಡರು. ನಂತರ ದೇವರಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳ ವತಿಯಿಂದ ಕಟ್ಟೆಪೂಜೆ ನಡೆಯಿತು. 


ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು, ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯ ಪ್ರಾಚಾರ್ಯೆ ಮಾಲತಿ ಡಿ, ಕ್ಯಾಂಪಸ್ ಮ್ಯಾನೇಜರ್ ರಾಜೇಂದ್ರ ಪ್ರಸಾದ್, ವಿದ್ಯಾಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿ ಸಮೂಹ, ಹೆತ್ತವರು, ಸಾರ್ವಜನಿಕರು ಹಾಗೂ ಭಕ್ತಾದಿಗಳು ಹಾಜರಿದ್ದರು.


ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಪೂಜೆ ನಿಮಿತ್ತ ಅಂಬಿಕಾ ವಿದ್ಯಾರ್ಥಿಗಳಿಂದ ಭಜನೆ, ಭಕ್ತಿಗೀತೆಗಳ ಗಾಯನ, ಕುಣಿತ ಭಜನೆ ಆಯೋಜನೆಗೊಂಡಿತು. ದೇವರ ಆಗಮನದ ಹಿನ್ನೆಲೆಯಲ್ಲಿ ಅಂಬಿಕಾ ಕ್ಯಾಂಪಸ್ ಅನ್ನು ಸಿಂಗರಿಸಲಾಗಿತ್ತು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top