VCET ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್.ಎಸ್.ಕೆ ಅವರಿಗೆ ಡಾಕ್ಟರೇಟ್ ಪದವಿ

Upayuktha
0



ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥ ಪ್ರೊ.ಶ್ರೀಕಾಂತ್ ರಾವ್.ಎಸ್.ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. 


ಕಂಪ್ಯೂಟರ್ ಎಯ್ಡೆಡ್ ಡಯಾಗ್ನೋಸಿಸ್ ಆಫ್ ಏಟ್ರಿಯಲ್ ಫೈಬ್ರಿಲ್ಲೇಶನ್ ಯೂಸಿಂಗ್ ಮೆಷಿನ್ ಲರ್ನಿಂಗ್ ಎಪ್ರೋಚ್ (Computer aided Diagnosis of Atrial fibrillation using machine learning approach) ಎನ್ನುವ ವಿಷಯದ ಬಗ್ಗೆ ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಅಸೋಸಿಯೇಟ್ ಪ್ರೊಫೆಸರ್ ಡಾ.ರೋಶನ್ ಜಾಯ್ ಮಾರ್ಟಿಸ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆಯನ್ನು ಮಾಡಿದ್ದಾರೆ. ಇವರು ಪ್ರಸ್ತುತ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದು 18 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ. 


ಡಾ.ಶ್ರೀಕಾಂತ್ ರಾವ್.ಎಸ್.ಕೆ ಅವರ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top